ಮಂಡ್ಯ: ಪಟಾಕಿ ಮದ್ದು ಸಿಡಿದು ಬೆಂಕಿ ಹೊತ್ತಿಕೊಂಡ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಜಿ.ಕೆಬ್ಬಹಳ್ಳಿ ಗ್ರಾಮದಲ್ಲಿ ಸೋಮವಾರ ( ಮಾರ್ಚ್ 25 ) ಬೆಳಗಿನ ಜಾವ ನಡೆದಿದೆ.
ತಮಿಳುನಾಡು ಮೂಲದ ರಮೇಶ್ (45) ಮೃತ ವ್ಯಕ್ತಿಯಾಗಿದ್ದು, ವಾನಗಾರ್ (55) ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿ. ಕೆಬ್ಬಹಳ್ಳಿ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆಯುವ ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸುವ ಜವಾಬ್ದಾರಿಯನ್ನು ತಮಿಳುನಾಡು ಮೂಲದ ವ್ಯಕ್ತಿಗಳಿಗೆ ನೀಡಲಾಗಿತ್ತು. ಅದರಂತೆ ನಾಲ್ವರು ಗ್ರಾಮಕ್ಕೆ ಬಂದು ಆಲೆಮನೆಯೊಂದರಲ್ಲಿ ವಾಸ್ತವ್ಯ ಹೂಡಿದ್ದರು.
ಭಾನುವಾರ ರಾತ್ರಿ ಹಬ್ಬ ಮುಗಿದ ನಂತರ ಆಲೆಮನೆಯಲ್ಲಿ ಮೂವರು ಕಾರ್ಮಿಕರು ನಿದ್ರೆ ಮಾಡುತ್ತಿದ್ದಾಗ, ರಮೇಶ್ ಮದ್ದು ತುಂಬುವ ವೇಳೆ ಈ ಅವಘಡ ಸಂಭವಿಸಿದೆ. ಸ್ಫೋಟದ ರಭಸಕ್ಕೆ ಆಲೆಮನೆ ಹೆಂಚು ಹಾರು ಹೋಗಿದ್ದು, ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ರಮೇಶ್ ಸ್ಥಳದಲ್ಲಿಯೇ ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರಿಶೀಲನೆ ನಡೆಸಿದ ಡಿಸಿ, ಎಸ್‌ಪಿ:
ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ಯತೀಶ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸ್ಥಳೀಯರಿಂದ ಮಾಹಿತಿ ಪಡೆದರು. ಘಟನಾ ಸ್ಥಳಕ್ಕೆ ಮೈಸೂರು ಪ್ರಾಂತ್ಯದ ಮುಖ್ಯ ಅಗ್ನಿಶಾಮಕ ಅಧಿಕಾರಿ ಪಿ.ಎಸ್. ಜಯರಾಮಯ್ಯ, ಮೈಸೂರು ವಲಯ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಪಿ. ಚಂದನ್ ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು. ಮಂಡ್ಯ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಿ.ಎಂ. ರಾಘವೇಂದ್ರ, ಅಗ್ನಿಶಾಮಕ ಠಾಣಾಧಿಕಾರಿ ವೆಂಕಟೇಶ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಬೆಂಕಿಯನ್ನು ಸಂಪೂರ್ಣ ನಂದಿಸಿದ್ದಾರೆ.
ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್‌ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…
ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ…
ಎಸ್.ನಾಗಸುಂದರ್ ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು…
ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ…
ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…