Mysore
25
overcast clouds

Social Media

ಶುಕ್ರವಾರ, 17 ಏಪ್ರಿಲ 2026
Light
Dark

ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ

ಮಂಡ್ಯ: ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಗ್ರಾಮವೊಂದರಲ್ಲಿ ನಡೆದಿದೆ.

ರಾಮಚಂದ್ರು ಎಂಬಾತನೇ ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದು, ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಿಲೆಟಿನ್ ಸ್ಫೋಟಕ್ಕೆ ಯುವಕನ ಹೊಟ್ಟೆಯ ಭಾಗ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಳೆದ ಕೆಲ ದಿನಗಳಿಂದ ಅಪ್ರಾಪ್ತ ಪ್ರಿಯತಮೆಯು ರಾಮಚಂದ್ರನ ಸಂಪರ್ಕಕ್ಕೆ ಸಿಗುತ್ತಿರಲಿಲ್ಲ. ಹೀಗಾಗಿ ಮನನೊಂದಿದ್ದ ರಾಮಚಂದ್ರ ಆಕೆಯ ಮನೆಯ ಮುಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತ ಶವವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಈ ಸಂಬಂಧ ನಾಗಮಂಗಲ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:
error: Content is protected !!