ಮಂಡ್ಯ: ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಗ್ರಾಮವೊಂದರಲ್ಲಿ ನಡೆದಿದೆ.
ರಾಮಚಂದ್ರು ಎಂಬಾತನೇ ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದು, ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಿಲೆಟಿನ್ ಸ್ಫೋಟಕ್ಕೆ ಯುವಕನ ಹೊಟ್ಟೆಯ ಭಾಗ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಳೆದ ಕೆಲ ದಿನಗಳಿಂದ ಅಪ್ರಾಪ್ತ ಪ್ರಿಯತಮೆಯು ರಾಮಚಂದ್ರನ ಸಂಪರ್ಕಕ್ಕೆ ಸಿಗುತ್ತಿರಲಿಲ್ಲ. ಹೀಗಾಗಿ ಮನನೊಂದಿದ್ದ ರಾಮಚಂದ್ರ ಆಕೆಯ ಮನೆಯ ಮುಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತ ಶವವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಈ ಸಂಬಂಧ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪಳ: ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ ಹಾಗೂ ಬಹುಭಾಷಾ ಪಂಡಿತ ಡಾ.ಪಂಚಾಕ್ಷರಿ ಹಿರೇಮಠ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.…
ರನ್ಯಾ ರಾವ್ ಚಿನ್ನ ಕಳ್ಳಸಾಗಾಣಿಕೆಗೆ ಖಾಕಿ ಖಾದಿ ಕಾವಿ ಕೃಪೆಯಂತೆ! ದಂಗುಬಡಿಸುವ ಸುದ್ದಿಯಿದು ಬೆಚ್ಚಿ ಬೆದರಿಬಿದ್ದಿದೆ ಜನ ಜಗ! ಕಲೆಯಲಿ…
ಫಲಾನುಭವಿಗಳಿಗೆ ಗ್ಯಾರಂಟಿಗಳನ್ನು ವಿತರಿಸುವಾಗ ಸರ್ಕಾರದಿಂದ ಆಗಬಹುದು ಅಲ್ಲಲ್ಲಿ ತುಸು ವ್ಯತ್ಯಾಸ... ಆದರೆ, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ…
ಕಳೆದ ವಾರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ೧೪ ಕೆ.ಜಿ. ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ನಟಿ ರನ್ಯಾ…
ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿಯನ್ನು ಹೊಂದಿರುವ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯಗಳಿಲ್ಲದೆ ಜನರು ಚಿಕಿತ್ಸೆಗಾಗಿ ಮೈಸೂರಿಗೆ ತೆರಳಬೇಕಾದ ಅನಿವಾರ್ಯತೆ…
ಡಿ.ವಿ.ರಾಜಶೇಖರ ಪಾಕಿಸ್ತಾನದ ಜಾಫರ್ ಎಕ್ಸ್ಪ್ರೆಸ್ ರೈಲು ಅಪಹರಣ ಮಾಡಿದ್ದ ಬಲೂಚಿ ಪ್ರತ್ಯೇಕತಾವಾದಿಗಳನ್ನು (ಬಲೂಚಿಸ್ತಾನ್ ಲಿಬರೇಷನ್ ಆರ್ಮಿ-ಬಿಎಲ್ಎ) ಕೊಲ್ಲುವಲ್ಲಿ ಪಾಕಿಸ್ತಾನ ಸೇನೆ…