Mysore
18
few clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.

ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ನಿವಾಸಿ ಪ್ರಹ್ಲಾದ್‌ ಮೃತಪಟ್ಟ ಯುವಕ.

ಇದನ್ನು ಓದಿ: ಚಾಮರಾಜನಗರ| ಅಪ್ಪನನ್ನೇ ಹೊಡೆದು ನದಿಗೆ ತಳ್ಳಿದ ಮಗ

ಪ್ರಹ್ಲಾದ್‌ ತನ್ನ ಸ್ನೇಹಿತರೊಂದಿಗೆ ಮುತ್ತತ್ತಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪ್ರವಾಸ ಬಂದಿದ್ದ. ಕಾವೇರಿ ನದಿಯಲ್ಲಿ ಈಜಲು ಹೋದಾಗ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾನೆ. ನುರಿತ ಈಜುಗಾರರ ಸಹಾಯದಿಂದ ಯುವಕನ ಮೃತದೇಹವನ್ನು ಹೊರತೆಗೆಯಲಾಯಿತು. ಈ ಸಂಬಂಧ ಹಲಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!