ಮಂಡ್ಯ

ಪೊಲೀಸ್ ಠಾಣೆ ಕೂಗಳತೆ ದೂರದಲ್ಲಿ ಯುವಕನ ಭೀಕರ ಕೊಲೆ

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ​

ಕೆ.ಆರ್.ಎಸ್ ಗ್ರಾಮದ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಅತ್ಯಂತ ಆಘಾತಕಾರಿ ವಿಷಯವೆಂದರೆ ಸ್ಥಳೀಯ ಪೊಲೀಸ್ ಠಾಣೆಯ ಅನತಿ ದೂರದಲ್ಲೇ ಈ ಕೃತ್ಯ ನಡೆದಿದೆ. ಕೆ.ಆರ್.ಪೇಟೆ ತಾಲ್ಲೂಕಿನ ಬಂಡೀಹೊಳೆ ಗ್ರಾಮದ ನಿವಾಸಿ ರಾಕೇಶ್ (28) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ.

ರಾತ್ರಿ ವೇಳೆ ಬಸ್ ನಿಲ್ದಾಣದ ಬಳಿ ಬಂದಿದ್ದ ರಾಕೇಶ್‌ನನ್ನು ಅಡ್ಡಗಟ್ಟಿರುವ ದುಷ್ಕರ್ಮಿಗಳು, ಆತನ ತಲೆಯ ಮೇಲೆ ಭಾರೀ ಗಾತ್ರದ ಕಲ್ಲು ಎತ್ತಿ ಹಾಕಿ ಕ್ರೂರವಾಗಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ. ಕೊಲೆಯಾದ ಸ್ಥಳದಲ್ಲೇ ಮೃತ ರಾಕೇಶ್‌ಗೆ ಸೇರಿದ ಬೈಕ್ ಪತ್ತೆಯಾಗಿದೆ. ​ವಿಷಯ ತಿಳಿಯುತ್ತಿದ್ದಂತೆ ಕೆ.ಆರ್.ಎಸ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಕೊಲೆಯಾದ ಯುವಕನ ಹಿನ್ನೆಲೆ ಹಾಗೂ ಕೊಲೆಗೆ ನಿಖರವಾದ ಕಾರಣ ಏನೆಂಬುದರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ​ಪೊಲೀಸ್ ಠಾಣೆಯ ಕೂಗಳತೆಯ ದೂರದಲ್ಲೇ ಈ ಭೀಕರ ಕೊಲೆ ನಡೆದಿರುವುದು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಹಾಗೂ ಭಯದ ವಾತಾವರಣ ಮೂಡಿಸಿದೆ. ಸದ್ಯ ಕೆ.ಆರ್.ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

15 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

15 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

16 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

16 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

16 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

16 hours ago