ನಾಗಮಂಗಲ: ಹಣಕಾಸಿನ ವಿಚಾರವಾಗಿ ವಾದ ವಿವಾದ ನಡೆದು ಚಾಕು ತೋರಿಸಿ ಎದುರಿಸಿದ ವ್ಯಕ್ತಿಗೆ ಕಂಬಕ್ಕೆ ಕಟ್ಟು ಹಾಕಿ ಊರ ಜನರು ಗೂಸ ನೀಡಿರುವ ಘಟನೆ ನಾಗಮಂಗಲ ತಾಲೂಕಿನ ದೇವಲಾಪುರ ಹೋಬಳಿಯ ಜಿ. ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಳೆದ ಸಂಜೆ ನಾಗೇಶ್ ಮತ್ತು ಅದೇ ಗ್ರಾಮದ ಚಲುವೇಶ್ ಎಂಬುವವರ ನಡುವೆ ಹಣಕಾಸಿನ ವಿಚಾರವಾಗಿ ವಾದ ವಿವಾದ ನಡೆದಿದೆ. ಈ ಸಂದರ್ಭದಲ್ಲಿ ನಾಗೇಶ್ ಚಾಕು ತೋರಿದ ಎಂಬ ಒಂದೇ ಕಾರಣಕ್ಕಾಗಿ ಆತನನ್ನು ಕಂಬಕ್ಕೆ ಕಟ್ಟಿ ಕೆಲವರು ಥಳಿಸಿದ್ದಾರೆ. ಈ ಸಂಬಂಧ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆ ನಡೆಸಿದವರ ವಿರುದ್ದ ದೂರು ದಾಖಲಾಗಿದೆ.
ಪ್ರಕರಣ ದಾಖಲಾಗುತ್ತಿದ್ದಂತೆ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ್ದ ಆರೋಪಿಗಳ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.





