ಮಂಡ್ಯ

ಜಿಲ್ಲೆಯಲ್ಲಿ ರಾಷ್ಟ್ರೀಯ ಬಾಲ ಸ್ವಸ್ಥ್ಯ ಆರೋಗ್ಯ ಕಾರ್ಯಕ್ರಮವನ್ನು ಚುರುಕುಗೊಳಿಸಿ : ಶೇಖ್ ತನ್ವೀರ್ ಆಸಿಫ್

ಮಂಡ್ಯ:  ಜಿಲ್ಲೆಯಲ್ಲಿ ರಾಷ್ಟ್ರೀಯ ಬಾಲ ಸ್ವಸ್ಥ್ಯ ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಅನುಷ್ಠಾನಗೊಳಿಸಿ  ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು  ಅಧಿಕಾರಿಗಳಿಗೆ ತಿಳಿಸಿದರು.

ಅವರು ಗುರುವಾರ(ಜೂ.28) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ರಾಷ್ಟ್ರೀಯ ಬಾಲ ಸ್ವಸ್ಥ್ಯ ಕಾರ್ಯಕ್ರಮವು ಅಂಗನವಾಡಿಗಳಲ್ಲಿ 6 ವರ್ಷದೊಳಗಿನ ಹಾಗೂ ಸರ್ಕಾರಿ/ ಅನುದಾನಿತ/ ಸರ್ಕಾರಿ ವಸತಿ ಶಾಲೆಗಳಲ್ಲಿ ವಿದ್ಯಭ್ಯಾಸ ಮಾಡುತ್ತಿರುವ 1 ರಿಂದ 12 ನೇ ತರಗತಿವರಗಿನ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಯನ್ನು ವರ್ಷಕ್ಕೆ ಎರಡು ಬಾರಿ ನಡೆಸಿ ಆರೋಗ್ಯದಲ್ಲಿ ಯಾವುದೇ ತೊಂದರೆಯಿದ್ದಲ್ಲಿ ಚಿಕಿತ್ಸೆ ನೀಡಲು ಸಹಕಾರಿಯಾಗಿದೆ ಎಂದರು.

ಕೆಲವು ಕಾಯಿಲೆಗಳು ಮಕ್ಕಳಿಗೆ ಹುಟ್ಟಿನಿಂದ ಬರುತ್ತದೆ. ಕೆಲವು ಪೋಷಕಾಂಶಗಳ ಕೊರತೆಯಿಂದ ಉಂಟಾಗುತ್ತದೆ. ಇವುಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಿದರೆ ಮಕ್ಕಳು ಗುಣಮುಖರಾಗುತ್ತಾರೆ. ವಿದ್ಯಾರ್ಥಿಗಳನ್ನು ವರ್ಷಕ್ಕೆ ಎರಡು ಬಾರಿ ಚಿಕಿತ್ಸೆಗೆ ಒಳಪಡಿಸುವುದರಿಂದ  ಮಕ್ಕಳ ಬೆಳವಣಿಗೆಯಲ್ಲಿ ಯಾವುದೇ ತೊಂದರೆ ಇದ್ದಲ್ಲಿ ತಕ್ಷಣ ವರದಿ ಮಾಡಿ ಚಿಕಿತ್ಸೆ ಕೊಡಿಸಿ ಎಂದರು.

ಸಭೆಯಲ್ಲಿ ಡಿಸೆಂಬರ್ 2023 ರಿಂದ ಏಪ್ರಿಲ್ 2024 ರವರೆಗೆ ಹೆರಿಗೆ ಸಂದರ್ಭದಲ್ಲಿ ಮೃತವಾದ ನವಜಾತ ಶಿಶುಗಳ ಕಾರಣ ಕುರಿತು ಪೋಷಕರೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಮೂರ್ತಿ,ಆರ್.ಸಿ.ಹೆಚ್.ಒ ಡಾ: ಅನಿಲ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

2 hours ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

2 hours ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

2 hours ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

2 hours ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

11 hours ago