ಮಂಡ್ಯ

ಪ್ರವಾಸಿಗರ ಗಮನಕ್ಕೆ: ಬಲಮುರಿ ಮತ್ತು ಎಡಮುರಿ ತಾಣಗಳಿಗೆ ಪ್ರವೇಶ ನಿರ್ಬಂಧ

ಮಂಡ್ಯ: ಬೇಸಿಗೆ ರಜೆ ಹಾಗೂ ವೀಕೆಂಡ್‌ ಹಿನ್ನೆಲೆಯಲ್ಲಿ ಮಂಡ್ಯ ಭಾಗದ ಪ್ರವಾಸಿ ತಾಣಗಳಾದ ಬಲಮುರಿ ಮತ್ತು ಎಡಮುರಿ ತಾಣಗಳಿಗೆ ನಿಷೇಧ ಹೇರಿ ಮಂಡ್ಯ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಲ್ಲಿ ಸಂಪೂರ್ಣವಾಗಿ ನಿಷೇಧ ಹೇರಿ ಮಂಡ್ಯ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಈ ಪ್ರದೇಶಗಳು ಮೃತ್ಯುಕೂಪವಾಗಿ ಮಾರ್ಪಟ್ಟಿದ್ದು, ನೀರಿನಲ್ಲಿ ಈಜಾಡಲು ಹೋಗಿ ಹಲವರು ಜೀವ ಕಳೆದುಕೊಳ್ಳುತ್ತಿದ್ದಾರೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ಪ್ರವಾಸಿಗರು ಮೃತಪಟ್ಟಿದ್ದಾರೆ.

ಕಳೆದ ಏಳೆಂಟು ವರ್ಷಗಳಲ್ಲಿ 80ಕ್ಕೂ ಹೆಚ್ಚು ಜನರು ಇಲ್ಲಿ ಜೀವ ಕಳೆದುಕೊಂಡಿದ್ದಾರೆ. ಈಗ ಬೇಸಿಗೆ ರಜೆ ಇರುವ ಕಾರಣ ಮಕ್ಕಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲಾಡಳಿತವು ಮುಂದಿನ ಆದೇಶದವರೆಗೆ ಬಲಮುರಿ ಮತ್ತು ಎಡಮುರಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿದೆ.

ಸ್ಥಳದಲ್ಲಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದ್ದು, ಯಾರೂ ಪ್ರವೇಶಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

8 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

10 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

13 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

14 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

14 hours ago