ಮಂಡ್ಯ : ಕುಟುಂಬಕ್ಕೆ ಆಧಾರವಾಗಿದ್ದ ಮಗ ಅಪಘಾತದಲ್ಲಿ ಮೃತಪಟ್ಟಿದ್ದ. ಮಗನನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಕುಟುಂಬ ದಿಕ್ಕು ತೋಚದೆ ಕಂಗಾಲಾಗಿತ್ತು. ಇಂತಹ ಸಂಕಷ್ಟದಲ್ಲಿ ಮೃತ ಯುವಕನ ಕುಟುಂಬದ ನೆರವಿಗೆ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ಬಂದಿದೆ.
ಮೃತ ಯುವಕ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 750 ರೂ. ಅಪಘಾತ ವಿಮೆ ಕಟ್ಟಿದ್ದ. ಈಗ ಬ್ಯಾಂಕ್ ಮೃತ ಯುವಕನ ಕುಟುಂಬಕ್ಕೆ 20 ಲಕ್ಷ ರೂ.ಗಳ ಪರಿಹಾರ ನೀಡಿದೆ. ಈ ವಿಮೆ ಯೋಜನೆಯಡಿ ಇಷ್ಟು ದೊಡ್ಡ ಮೊತ್ತದ ಪರಿಹಾರ ನೀಡಿರುವುದು ದೇಶದಲ್ಲಿಯೇ ಮೊದಲ ಪ್ರಕರಣ ಎಂದು ಬ್ಯಾಂಕ್‌ನ ಅಧಿಕಾರಿಗಳು ತಿಳಿಸಿದ್ದಾರೆ.
ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದ ಮಾಚಲಪ್ಪ ಮತ್ತು ಮಹದೇವಮ್ಮ ಎಂಬುವರ ಮಗ ಅವಿನಾಶ್ (30) ಕೆಲ ತಿಂಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದರು. ದುಡಿಯುತ್ತಿದ್ದ ಮಗನನ್ನು ಕಳೆದುಕೊಂಡ ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಈ ನಡುವೆ ಅಪಘಾತ ವಿಮೆ ನೆರವಿಗೆ ಬಂದಿದ್ದು, ಪರಿಹಾರದ ಹಣ ಕುಟುಂಬದ ಕೈ ಸೇರಿದೆ.
ಅವಿನಾಶ್ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನ ಕೀಲಾರ ಶಾಖೆಯಲ್ಲಿ ಅಪಘಾತ ವಿಮೆ ಕಟ್ಟಿದ್ದರು. ಅದರಂತೆ ವಾರ್ಷಿಕ 750 ರೂ. ಮೊದಲ ಕಂತನ್ನು ಪಾವತಿಸಿದ್ದರು. ಈ ಹಿನ್ನೆಲೆಯಲ್ಲಿ ವಿಮೆ ಯೋಜನೆಯಂತೆ ನೊಂದ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ.
ಕೀಲಾರ ಗ್ರಾಮದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ಮೈಸೂರು ಡಿವಿಷನ್ ಮ್ಯಾನೇಜರ್ ವಿಕಾಶ್‌ವರ್ಮಾ, ಅಧಿಕಾರಿ ಮೀನಾಕ್ಷಿ, ಕೀಲಾರ ಶಾಖೆಯ ವ್ಯವಸ್ಥಾಪಕ ನಿರ್ದೇಶಕ ಜಯಕೃಷ್ಣ, ಸಹಾಯಕ ವ್ಯವಸ್ಥಾಪಕ ಮಹಾವೀರ್‌ಸಿಂಗ್ ಅವರು ಮೃತ ಅವಿನಾಶ್ ತಾಯಿ ಮಹದೇವಮ್ಮ ಅವರಿಗೆ 20 ಲಕ್ಷ ರೂ.ಗಳ ಪರಿಹಾರದ ಚೆಕ್ ವಿತರಣೆ ಮಾಡಿದರು.
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…
ನವದೆಹಲಿ: ಬಾಬಾಸಾಹೇಬ್ ಅಂಬೇಡ್ಕರ್ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…
ತುಮಕೂರು: 70 ಲಕ್ಷ ಕರೆಂಟ್ ಬಿಲ್ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…
ಹೈದರಾಬಾದ್: ಟಾಲಿವುಡ್ ಚಲನಚಿತ್ರ ಬಳಗಂ ಮೂಲಕ ಪ್ರಖ್ಯಾತಿ ಗಳಿಸಿದ್ದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗಿಲಯ್ಯ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.…