ಮಂಡ್ಯ: ಮದ್ದೂರು ತಾಲೂಕಿನ ಮಣಿಗೆರೆ ಬಳಿ ನಡೆದ ಕಾರು ಹಾಗೂ ಗೂಡ್ಸ್ ವಾಹನ ಅಪಘಾತದ 29 ಮಂದಿ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿ ಸಾಂತ್ವಾನ ಹೇಳಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕಾರು-ಗೂಡ್ಸ್ ಗಾಡಿ ನಡುವೆ ಡಿಕ್ಕಿಯಾಗಿ 28 ಜನರಿಗೆ ಗಂಭೀರ ಗಾಯವಾಗಿದೆ. ಎಲ್ಲರಿಗೂ ಸೂಕ್ತ ಚಿಕಿತ್ಸೆ ಕೊಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಎಲ್ಲರೂ ಆರೋಗ್ಯವಾಗಿದ್ದಾರೆ, ಯಾವುದೇ ರೀತಿಯ ಪ್ರಾಣ ಹಾನಿಯಾಗಿಲ್ಲ.ಗ್ರಾಮೀಣ ಭಾಗದ ಜನರು ಟೆಂಪೋ ಹಾಗೂ ಗೂಡ್ಸ್ ಗಾಡಿಗಳಲ್ಲಿ ಹೋಗುವುದನ್ನ ನಿಲ್ಲಿಸಬೇಕು. ಹೆಚ್ಚು ಜನರು ಗೂಡ್ಸ್ ಗಾಡಿಗಳಲ್ಲಿ ಪ್ರಯಾಣಿಬಾರದು ಎಂದು ನಿಷೇಧ ಇದೆ. ಜನರು ಎಚ್ಚರಿಕೆ ವಹಿಸಬೇಕು. ಇದರ ಬಗ್ಗೆ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇದೇ ವೇಳೆ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಡಿಸಿ ಡಾ.ಕುಮಾರ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸೇರಿ ಹಲವರು ಭಾಗಿಯಾಗಿದ್ದರು.