ಮಂಡ್ಯ

ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೊಪ್ಪದಲ್ಲಿ ಸಂಭವಿಸಿದೆ.

ಬೆಂಗಳೂರಿನ ಮುತ್ತುರಾಜ್ (35), ಕಾವ್ಯ (30) ಹಾಗೂ ಕೀರ್ತನ (08) ಮೃತಪಟ್ಟವರು. ಅಪಘಾತದಲ್ಲಿ ಮತ್ತೊಂದು ಮಗುವಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದ ಕುಟುಂಬ, ಹಬ್ಬ ಮುಗಿಸಿ ಇಂದು ಬೆಳಗ್ಗೆ ಬೈಕ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಕೊಪ್ಪದಲ್ಲಿ ಹಾಲಿನ ಟ್ಯಾಂಕರ್ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಪತಿ, ಪತ್ನಿ ಹಾಗೂ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಮಂಡ್ಯ ಮಿಮ್ಸ್ ಶವಾಗಾರಕ್ಕೆ ರವಾನಿಸಲಾಗಿದೆ.

ಘಟನೆ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

4 hours ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

4 hours ago

ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್: ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…

4 hours ago

2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ: ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…

5 hours ago

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

1 day ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

1 day ago