ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್ ಸಾವು ನೋವು ಸಂಭವಿಸಿಲ್ಲ.
ಶ್ರೀರಂಗಪಟ್ಟಣ ತಾಲ್ಲೂಕಿನ ಹೊಸಹಳ್ಳಿ ಗ್ರಾಮದ ರಂಜಿತ ಅವರು ಬೆಂಗಳೂರಿನ ತಾಯಿ ಮನೆಗೆ ಕಾರಿನಲ್ಲಿ ಹೋಗಿ ಗುರುವಾರ ಸಂಜೆ 5 ಗಂಟೆಗೆ ಸುಮಾರಿಗೆ ವಾಪಸ್ ಶ್ರೀರಂಗಪಟ್ಟಣಕ್ಕೆ ಬರುತ್ತಿದ್ದಾಗ ಇದ್ದಕ್ಕಿದಂತೆ ಬೆಂಕಿ ಕಾಣಿಸಿಕೊಂಡಿದೆ.
ಈ ವೇಳೆ ಕಾರಿನ ಚಾಲಕ ಕಿರಣ್ ಅವರು ತಕ್ಷಣ ಕಾರಿನಿಂದ ಇಳಿದು ರಂಜಿತಾ ಅವರನ್ನು ಕಾರಿನಿಂದ ಕೆಳಗಿಳಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ವೇಳೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಸಂಚಾರ ಪಿಎಸ್‌ಐ ರಂಗಸ್ವಾಮಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡರಲ್ಲದೆ, ವಾಹನ ತೆರವಿಗೆ ಕ್ರಮವಹಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.





