ಶ್ರೀರಂಗಪಟ್ಟಣ: ಆಕಸ್ಮಿಕ ಬೆಂಕಿ ಬಿದ್ದು ರಾಸುಗಳ ಮೇವಿಗೆಂದು ಸಂಗ್ರಹಿಸಿಟ್ಟಿದ್ದ ಭಾರೀ ಗಾತ್ರ ಮೂರು ಒಣ ಹುಲ್ಲಿನ ಮೆದೆಗಳು ಭಸ್ಮವಾಗಿರುವ ಘಟನೆ ಅರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಗಾಮನಹಳ್ಳಿ ಗ್ರಾಮದ ಚನ್ನಬಸಪ್ಪ ಹಾಗೂ ಬಸವರಾಜು ಎಂಬುವವರಿಗೆ ಸೇರಿದ್ದ 1 ಲಕ್ಷ ರೂ ಮೌಲ್ಯದ ಹುಲ್ಲಿನ ಮೆದೆಗಳಿಗೆ ಆಕಸ್ಮಿಕ ಬೆಂಕಿ ಬಿದ್ದಿದ್ದು, ಬೆಂಕಿಯನ್ನು ನಂದಿಸಲು ಸ್ಥಳೀಯರು ಹರ ಸಾಹಸಪಟ್ಟಿದ್ದಾರೆ. ವಿಷಯ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಬಂದರಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಪರಿಣಾಮ ಮೂರು ಹುಲ್ಲಿನ ಮೆದೆಗಳು ಸಂಪೂರ್ಣ ಭಸ್ಮವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಈ ಸಂಬಂಧ ಅರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನಲ್ಲಿ ಹುಲಿಯೊಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ರಾಜ್ಯದಲ್ಲಿ ದಿನದಿಂದ…
ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನ ಕಾಡಂಚಿನ ಪ್ರದೇಶದಲ್ಲಿ ವನ್ಯಜಜೀವಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಕೂತಿ ಗ್ರಾಮದ…
ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…
ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು…
ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ…