ಮಂಡ್ಯ: ಮತಾಂತರಕ್ಕೆ ಒಪ್ಪದ ಅತ್ತೆ ಹಾಗೂ ಪತಿಯ ಮೇಲೆ ಪತಿ ಹಾಗೂ ಆತನ ಕುಟುಂಬದವರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶ್ರೀರಂಗಪಟ್ಟಣದ ಪಾಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮೀ ಹಾಗೂ ಶೃತಿ ಎಂಬುವವರೇ ಹಲ್ಲೆಗೊಳಗಾದ ತಾಯಿ-ಮಗಳಾಗಿದ್ದಾರೆ. ಲಕ್ಷ್ಮೀಯ ಪತಿ ಶ್ರೀಕಾಂತ್ ಹಾಗೂ ಆತನ ಕುಟುಂಬಸ್ಥರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆ ಸಂಬಂಧ ಮಹಿಳೆಯ ಸಹೋದರ ರವಿಕಿರಣ್ ನೀಡಿದ ದೂರಿನ ಮೇಲೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
15 ವರ್ಷಗಳ ಹಿಂದೆ ವಿವಾಹವಾಗಿದ್ದ ಲಕ್ಷ್ಮೀ ಹಾಗೂ ಶ್ರೀಕಾಂತ್, ಆರಂಭದಲ್ಲಿ ಚೆನ್ನಾಗಿಯೇ ಇದ್ದರು.
ವರ್ಷ ಕಳೆದಂತೆ ಪತಿಯ ಕುಟುಂಬಸ್ಥರು ಅನ್ಯ ಧರ್ಮಕ್ಕೆ ಮತಾಂತರವಾಗಿದ್ದರು. ಆದರೆ ಲಕ್ಷ್ಮೀ ಮತಾಂತರಕ್ಕೆ ಒಪ್ಪಲಿಲ್ಲ. ಅಂದಿನಿಂದ ಲಕ್ಷ್ಮೀಗೆ ಕಿರುಕುಳ ನೀಡಲು ಶುರು ಮಾಡಿದ್ದರು ಎನ್ನಲಾಗಿದೆ.
ಪ್ರಕರಣ ಸಂಬಂಧ 9 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರ ತನಿಖೆಯಿಂದ ಹೆಚ್ಚಿನ ವಿಚಾರ ತಿಳಿದು ಬರಲಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…