ಮಂಡ್ಯ

ಮಂಡ್ಯ| ಮತಾಂತರ ಆರೋಪ: ಪತ್ನಿ ಹಾಗೂ ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ

ಮಂಡ್ಯ: ಮತಾಂತರಕ್ಕೆ ಒಪ್ಪದ ಅತ್ತೆ ಹಾಗೂ ಪತಿಯ ಮೇಲೆ ಪತಿ ಹಾಗೂ ಆತನ ಕುಟುಂಬದವರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶ್ರೀರಂಗಪಟ್ಟಣದ ಪಾಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಲಕ್ಷ್ಮೀ ಹಾಗೂ ಶೃತಿ ಎಂಬುವವರೇ ಹಲ್ಲೆಗೊಳಗಾದ ತಾಯಿ-ಮಗಳಾಗಿದ್ದಾರೆ. ಲಕ್ಷ್ಮೀಯ ಪತಿ ಶ್ರೀಕಾಂತ್‌ ಹಾಗೂ ಆತನ ಕುಟುಂಬಸ್ಥರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ಮಹಿಳೆಯ ಸಹೋದರ ರವಿಕಿರಣ್‌ ನೀಡಿದ ದೂರಿನ ಮೇಲೆ ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

15 ವರ್ಷಗಳ ಹಿಂದೆ ವಿವಾಹವಾಗಿದ್ದ ಲಕ್ಷ್ಮೀ ಹಾಗೂ ಶ್ರೀಕಾಂತ್‌, ಆರಂಭದಲ್ಲಿ ಚೆನ್ನಾಗಿಯೇ ಇದ್ದರು.

ವರ್ಷ ಕಳೆದಂತೆ ಪತಿಯ ಕುಟುಂಬಸ್ಥರು ಅನ್ಯ ಧರ್ಮಕ್ಕೆ ಮತಾಂತರವಾಗಿದ್ದರು. ಆದರೆ ಲಕ್ಷ್ಮೀ ಮತಾಂತರಕ್ಕೆ ಒಪ್ಪಲಿಲ್ಲ. ಅಂದಿನಿಂದ ಲಕ್ಷ್ಮೀಗೆ ಕಿರುಕುಳ ನೀಡಲು ಶುರು ಮಾಡಿದ್ದರು ಎನ್ನಲಾಗಿದೆ.

ಪ್ರಕರಣ ಸಂಬಂಧ 9 ಜನರ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಪೊಲೀಸರ ತನಿಖೆಯಿಂದ ಹೆಚ್ಚಿನ ವಿಚಾರ ತಿಳಿದು ಬರಲಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

6 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

6 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

6 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

6 hours ago

ಪರಿಸರ ಸ್ನೇಹಿ ಸಮಾಜ ಮನೆಯಿಂದಲೇ ಆರಂಭವಾಗಲಿ

ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…

6 hours ago

ಮತ್ತೊಮ್ಮೆ ನ್ಯಾಯಾಲಯದತ್ತ ಮಲ್ಟಿಪ್ಲೆಕ್ಸ್ ಸಂಘಟನೆ, ಇತರರು

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…

6 hours ago