ಮಂಡ್ಯ: ವ್ಯಕ್ತಿಯೋರ್ವ ವಿಚಾರಣೆಗೆಂದು ಬಂದು ಎಎಸ್‌ಐ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ.
ನಾಗಮಂಗಲ ಗ್ರಾಮಾಂತರ ಎಎಸ್‌ಐ ರಾಜು ಮಜ್ಜನ ಕೊಪ್ಪಲು ಎಂಬುವವರ ಮೇಳೆ ಪೂಜಾರಿ ಕೃಷ್ಣ ಎಂಬಾತ ಹಲ್ಲೆ ನಡೆಸಿದ್ದಾನೆ.
ಆರೋಪಿ ಕೃಷ್ಣನ ವಿರುದ್ಧ ಆತನ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರತಿ ದಿನ ಹಣ ನೀಡುವಂತೆ ಕಿರುಕುಳ ನೀಡುತ್ತಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ಈ ಹಿನ್ನೆಲೆಯಲ್ಲಿ ಕೃಷ್ಣನನ್ನು ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆತರಲು ಎಎಸ್‌ಐ ರಾಜು ಹೊರಟಿದ್ದರು. ಈ ವೇಳೆ ನಾಗಮಂಗಲ ಕೋರ್ಟ್ ಬಳಿ ನಿಂತಿದ್ದ ಕೃಷ್ಣನನ್ನು ಎಎಸ್‌ಐ ಠಾಣೆಗೆ ಕರೆದಿದ್ದಾರೆ. ಠಾಣೆಗೆ ಬರಲು ಕೃಷ್ಣ ಒಪ್ಪಿಲ್ಲ. ಈ ವೇಳೆ ಕೃಷ್ಣನ ಕಾಲರ್ ಹಿಡಿದು ಬಲವಂತವಾಗಿ ಆಟೋಗೆ ಹತ್ತಿಸಲು ಯತ್ನಿಸಿದ್ದಾರೆ. ಈ ವೇಳೆ ಎಎಸ್‌ಐ ಅವರನ್ನು ತಳ್ಳಿದ ಕೃಷ್ಣ ಹಲ್ಲೆ ನಡೆಸಿದ್ದಾನೆ.
ಘಟನೆ ನಡೆದ ಬಳಿಕ ಆರೋಪಿ ಕೃಷ್ಣನನ್ನು ಬಂಧಿಸಿದ ಪೊಲೀಸರು ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…