ಮಂಡ್ಯ

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ನೇಮಕಕ್ಕೆ ಕ್ರಮ: ಡಾ.ಕುಮಾರ

ಮಂಡ್ಯ:  ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಕೊರತೆ ಇದ್ದು, ಭರ್ತಿ ಮಾಡುವ ಪ್ರಕ್ರಿಯೆ ನಡೆಸಲಾಗುತ್ತಿದೆ. ಈಗಿರುವ ಶಿಕ್ಷಕರ ಸಹಕಾರದೊಂದಿಗೆ ವ್ಯವಸ್ಥಿತವಾಗಿ ತರಗತಿಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಡಾ ಕುಮಾರ  ಪ್ರಾಂಶುಪಾಲರಿಗೆ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೇಂದ್ರೀಯ ವಿದ್ಯಾಲಯದ ಪೋಷಕರ ಸಭೆ ಹಾಗೂ ಕೇಂದ್ರ ವಿದ್ಯಾಲಯದ ಕಟ್ಟಡ ಕಾಮಗಾರಿ ಸಭೆ ಕುರಿತು ಮಾತನಾಡಿದರು.

ಕೇಂದ್ರೀಯ ವಿದ್ಯಾಲಯಗಳಲ್ಲಿ ವಿಷಯವಾರು ಶಿಕ್ಷಕರ ಕೊರತೆ ಹಾಗೂ ಇರುವ ಶಿಕ್ಷಕರು ಕೆಲಸಗಳನ್ನು ಸರಿಯಾಗಿ ನಿಭಾಯಿಸುತ್ತಿಲ್ಲ, ಸಂವಾಹನದಲ್ಲಿ ಭಾಷೆಯ ತೊಂದರೆ ಉಂಟಾಗುತ್ತಿದೆ ಎಂದು ಪೋಷಕರು ದೂರು ಸಲ್ಲಿಸಿದ್ದು, ಪ್ರಾಂಶುಪಾಲರು ತೊಂದರೆಗಳನ್ನು ಪರಿಹರಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸಿದರು.

ಮಕ್ಕಳಲ್ಲಿ ಯಾವುದೇ ಬೇಧಬಾವ ಮಾಡಬಾರದು, ಭಾಷೆ ಕೊರತೆಯ ನೆಪ ಹೇಳದೆ ಮಕ್ಕಳಿಗೆ ಸರಿಯಾಗಿ ತರಗತಿಗಳನ್ನು ಮಾಡಬೇಕು, ಎಲ್ಲಾ ರೀತಿಯ ಚಟುವಟಿಕೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಬೇಕು ಪೋಷಕರ ಸಭೆ ನಡೆಸಿ ಮಕ್ಕಳ ಬಗ್ಗೆ ವರದಿ ಸಲ್ಲಿಸಬೇಕು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಡಾ. ಎಚ್ ಎಲ್ ನಾಗರಾಜ್ ಮಾತನಾಡಿ, ಆಯಾ ವಿಷಯಗಳಿಗೆ ಸಂಬಂಧಿಸಿದ ಶಿಕ್ಷಕರನ್ನು ಸದ್ಯದಲ್ಲಿ ನೇಮಕ ಮಾಡಲಾಗುವುದು, ಹಾಗೂ ಕಟ್ಟಡ ಕಾಮಗಾರಿ ಕೆಲಸವು ಅಂತಿಮ ಹಂತದಲ್ಲಿದ್ದು, ಇದರ ಬಗ್ಗೆ ಪೋಷಕರಿಗೆ ಯಾವುದೇ ಆತಂಕ ಬೇಡ ಎಂದು ಹೇಳಿದರು.

ಈಗಾಗಲೇ ಶಿಕ್ಷಕರ ಸಂದರ್ಶನ ನಡೆಯುತ್ತಿದ್ದು ಆದಷ್ಟು ಬೇಗ ಶಿಕ್ಷಕರ ನೇಮಕಾತಿ ನಡೆಸಲಾಗುವುದು ಎಂದು ಹೇಳಿದರು. ಮಕ್ಕಳಿಗೆ ಆರ್ಥವಾಗುವ ರೀತಿಯಲ್ಲಿ ಪಾಠಗಳು ನಡೆಯಬೇಕು ಎಂದರು.

ಗಣಿತ ಹಾಗೂ ಹಿಂದಿ ವಿಷಯಗಳಲ್ಲಿ ಸ್ವಲ್ಪ ನಿಗಾವಹಿಸಿ ತರಗತಿಗಳನ್ನು ಮಾಡಿ ಉಳಿದ ವಿಷಯಗಳಂತೆ ಈವಿಷಯಗಳು ಸುಲಭವಲ್ಲ ಆದ್ದರಿಂದ ತರಗತಿಗಳನ್ನು ಸರಿಯಾಗಿ ನಡೆಸಿ ಮತ್ತೊಮ್ಮೆ ಪೋಷಕರಿಂದ ಯಾವುದೇ ದೂರುಗಳು ಬರಬಾರದು ಎಂದು ತಿಳಿಸಿದರು.

ಸಭೆಯಲ್ಲಿ ಕೇಂದ್ರಿಯ ಪ್ರಾಂಶುಪಾಲರಾದ ಭರತ್ ಲಾಲ್ ಮೀನಾ, ಮುಖಂಡರುಗಳಾದ ಪ್ರೊ. ಬಿ. ಜಯಪ್ರಕಾಶ್ ಗೌಡ, ಕೀಲಾರಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

26 mins ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

3 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

3 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

3 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

4 hours ago

ಆಂತರಿಕ ಕ್ಷೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

4 hours ago