ಮಂಡ್ಯ: ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಕೊರತೆ ಇದ್ದು, ಭರ್ತಿ ಮಾಡುವ ಪ್ರಕ್ರಿಯೆ ನಡೆಸಲಾಗುತ್ತಿದೆ. ಈಗಿರುವ ಶಿಕ್ಷಕರ ಸಹಕಾರದೊಂದಿಗೆ ವ್ಯವಸ್ಥಿತವಾಗಿ ತರಗತಿಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಡಾ ಕುಮಾರ ಪ್ರಾಂಶುಪಾಲರಿಗೆ ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೇಂದ್ರೀಯ ವಿದ್ಯಾಲಯದ ಪೋಷಕರ ಸಭೆ ಹಾಗೂ ಕೇಂದ್ರ ವಿದ್ಯಾಲಯದ ಕಟ್ಟಡ ಕಾಮಗಾರಿ ಸಭೆ ಕುರಿತು ಮಾತನಾಡಿದರು.
ಕೇಂದ್ರೀಯ ವಿದ್ಯಾಲಯಗಳಲ್ಲಿ ವಿಷಯವಾರು ಶಿಕ್ಷಕರ ಕೊರತೆ ಹಾಗೂ ಇರುವ ಶಿಕ್ಷಕರು ಕೆಲಸಗಳನ್ನು ಸರಿಯಾಗಿ ನಿಭಾಯಿಸುತ್ತಿಲ್ಲ, ಸಂವಾಹನದಲ್ಲಿ ಭಾಷೆಯ ತೊಂದರೆ ಉಂಟಾಗುತ್ತಿದೆ ಎಂದು ಪೋಷಕರು ದೂರು ಸಲ್ಲಿಸಿದ್ದು, ಪ್ರಾಂಶುಪಾಲರು ತೊಂದರೆಗಳನ್ನು ಪರಿಹರಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸಿದರು.
ಮಕ್ಕಳಲ್ಲಿ ಯಾವುದೇ ಬೇಧಬಾವ ಮಾಡಬಾರದು, ಭಾಷೆ ಕೊರತೆಯ ನೆಪ ಹೇಳದೆ ಮಕ್ಕಳಿಗೆ ಸರಿಯಾಗಿ ತರಗತಿಗಳನ್ನು ಮಾಡಬೇಕು, ಎಲ್ಲಾ ರೀತಿಯ ಚಟುವಟಿಕೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಬೇಕು ಪೋಷಕರ ಸಭೆ ನಡೆಸಿ ಮಕ್ಕಳ ಬಗ್ಗೆ ವರದಿ ಸಲ್ಲಿಸಬೇಕು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಡಾ. ಎಚ್ ಎಲ್ ನಾಗರಾಜ್ ಮಾತನಾಡಿ, ಆಯಾ ವಿಷಯಗಳಿಗೆ ಸಂಬಂಧಿಸಿದ ಶಿಕ್ಷಕರನ್ನು ಸದ್ಯದಲ್ಲಿ ನೇಮಕ ಮಾಡಲಾಗುವುದು, ಹಾಗೂ ಕಟ್ಟಡ ಕಾಮಗಾರಿ ಕೆಲಸವು ಅಂತಿಮ ಹಂತದಲ್ಲಿದ್ದು, ಇದರ ಬಗ್ಗೆ ಪೋಷಕರಿಗೆ ಯಾವುದೇ ಆತಂಕ ಬೇಡ ಎಂದು ಹೇಳಿದರು.
ಈಗಾಗಲೇ ಶಿಕ್ಷಕರ ಸಂದರ್ಶನ ನಡೆಯುತ್ತಿದ್ದು ಆದಷ್ಟು ಬೇಗ ಶಿಕ್ಷಕರ ನೇಮಕಾತಿ ನಡೆಸಲಾಗುವುದು ಎಂದು ಹೇಳಿದರು. ಮಕ್ಕಳಿಗೆ ಆರ್ಥವಾಗುವ ರೀತಿಯಲ್ಲಿ ಪಾಠಗಳು ನಡೆಯಬೇಕು ಎಂದರು.
ಗಣಿತ ಹಾಗೂ ಹಿಂದಿ ವಿಷಯಗಳಲ್ಲಿ ಸ್ವಲ್ಪ ನಿಗಾವಹಿಸಿ ತರಗತಿಗಳನ್ನು ಮಾಡಿ ಉಳಿದ ವಿಷಯಗಳಂತೆ ಈವಿಷಯಗಳು ಸುಲಭವಲ್ಲ ಆದ್ದರಿಂದ ತರಗತಿಗಳನ್ನು ಸರಿಯಾಗಿ ನಡೆಸಿ ಮತ್ತೊಮ್ಮೆ ಪೋಷಕರಿಂದ ಯಾವುದೇ ದೂರುಗಳು ಬರಬಾರದು ಎಂದು ತಿಳಿಸಿದರು.
ಸಭೆಯಲ್ಲಿ ಕೇಂದ್ರಿಯ ಪ್ರಾಂಶುಪಾಲರಾದ ಭರತ್ ಲಾಲ್ ಮೀನಾ, ಮುಖಂಡರುಗಳಾದ ಪ್ರೊ. ಬಿ. ಜಯಪ್ರಕಾಶ್ ಗೌಡ, ಕೀಲಾರಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…