Mysore
29
scattered clouds

Social Media

ಶನಿವಾರ, 07 ಡಿಸೆಂಬರ್ 2024
Light
Dark

ʼಅಮ್ಮʼನ ಕೈಬಿಟ್ಟು ಸ್ಟಾರ್‌ ಚಂದ್ರು ಪರ ಮತ ಪ್ರಚಾರಕ್ಕಿಳಿದ ಡಿ ಬಾಸ್‌!

ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರನ್ನು ಅಮ್ಮ ಎಂದೇ ಕರೆಯುವ ಡಿಬಾಸ್‌ ನಟ ದರ್ಶನ್‌ ಅವರು ವಿರುದ್ಧ ಕಾಂಗ್ರೆಸ್‌ ಪಕ್ಷದ ಪರವಾಗಿ ಮತ ಪ್ರಚಾರಕ್ಕಿಳಿಯಲಿದ್ದಾರೆ. ಇದು ಸದ್ಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಕಳೆದ ಬಾರಿ ಮಾಜಿ ಸಿಎಂ ಪುತ್ರ ನಿಖಿಲ್‌ ವಿರುದ್ಧ ಮತಬೇಟೆ ಮಾಡಿದ್ದ ಡಿಬಾಸ್‌ ಇಂದು ಮೈತ್ರಿ ಸರ್ಕಾರದ ಅಭ್ಯರ್ಥಿಯಾಗಿರುವ ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಮತ ಪ್ರಚಾರಕ್ಕೆ ದರ್ಶನ್‌ ನಿರಾಕರಿಸಿದ್ದಾರೆ ಎನ್ನಲಾಗಿದೆ.

ಬಿಜೆಪಿ ಸೇರಿರುವ ಸುಮಲತಾ ಅವರು, ಎಚ್‌ಡಿಕೆ ಪರ ಇನ್ನೂ ಪ್ರಚಾರಕ್ಕೆ ಇಳಿದಿಲ್ಲ. ಮತ್ತು ಅಗತ್ಯಬಿದ್ದರೇ ಚುನಾವಣೆ ಮಾಡುವುದಾಗಿ ಹೇಳಿದ್ದ ಸುಮಲತಾ ಅವರು ಇನ್ನು ಮೌನ ವಹಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ದರ್ಶನ್‌ ಮಂಡ್ಯ ಲೋಕಸಭಾ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ಪ್ರಚಾರಕ್ಕೆ ಇಳಿಯಲಿದ್ದು ಅಚ್ಚರಿಗೆ ಕಾರಣವಾಗಿದೆ.

ಕಳೆದ ಚುನಾವಣೆಯಲ್ಲಿ ಯಶ್ ಜತೆ ಜೋಡೆತ್ತಿನಂತೆ ನಿಂತಿದ್ದ ದರ್ಶನ್ ಸುಮಲತಾ ಪರ ಬೆವರು ಸುರಿಸಿ ಮಂಡ್ಯದಲ್ಲಿ ಪ್ರಚಾರ ಮಾಡಿದ್ದರು. ಆದರೆ, ಈಗ ಸುಮಲತಾ ಬಿಜೆಪಿಯಲ್ಲಿದ್ದರೂ ದರ್ಶನ್ ಕಾಂಗ್ರೆಸ್ ಪರ ಪ್ರಚಾರಕ್ಕೆ ಹೋಗುತ್ತಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಈ ಹಿಂದೆ ಅಮ್ಮ ಬಾವಿಗೆ ಬೀಳು ಎಂದರು ನಾನು ಬೀಳಲು ಸಿದ್ದ ಎಂದು ಹೇಳಿದ್ದ ದರ್ಶನ್‌ ಯು ಟರ್ನ್‌ ಹೊಡೆದಿದ್ದಾರಾ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

Tags: