ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಅಮ್ಮ ಎಂದೇ ಕರೆಯುವ ಡಿಬಾಸ್ ನಟ ದರ್ಶನ್ ಅವರು ವಿರುದ್ಧ ಕಾಂಗ್ರೆಸ್ ಪಕ್ಷದ ಪರವಾಗಿ ಮತ ಪ್ರಚಾರಕ್ಕಿಳಿಯಲಿದ್ದಾರೆ. ಇದು ಸದ್ಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.
ಕಳೆದ ಬಾರಿ ಮಾಜಿ ಸಿಎಂ ಪುತ್ರ ನಿಖಿಲ್ ವಿರುದ್ಧ ಮತಬೇಟೆ ಮಾಡಿದ್ದ ಡಿಬಾಸ್ ಇಂದು ಮೈತ್ರಿ ಸರ್ಕಾರದ ಅಭ್ಯರ್ಥಿಯಾಗಿರುವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಮತ ಪ್ರಚಾರಕ್ಕೆ ದರ್ಶನ್ ನಿರಾಕರಿಸಿದ್ದಾರೆ ಎನ್ನಲಾಗಿದೆ.
ಬಿಜೆಪಿ ಸೇರಿರುವ ಸುಮಲತಾ ಅವರು, ಎಚ್‌ಡಿಕೆ ಪರ ಇನ್ನೂ ಪ್ರಚಾರಕ್ಕೆ ಇಳಿದಿಲ್ಲ. ಮತ್ತು ಅಗತ್ಯಬಿದ್ದರೇ ಚುನಾವಣೆ ಮಾಡುವುದಾಗಿ ಹೇಳಿದ್ದ ಸುಮಲತಾ ಅವರು ಇನ್ನು ಮೌನ ವಹಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ದರ್ಶನ್ ಮಂಡ್ಯ ಲೋಕಸಭಾ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಇಳಿಯಲಿದ್ದು ಅಚ್ಚರಿಗೆ ಕಾರಣವಾಗಿದೆ.
ಕಳೆದ ಚುನಾವಣೆಯಲ್ಲಿ ಯಶ್ ಜತೆ ಜೋಡೆತ್ತಿನಂತೆ ನಿಂತಿದ್ದ ದರ್ಶನ್ ಸುಮಲತಾ ಪರ ಬೆವರು ಸುರಿಸಿ ಮಂಡ್ಯದಲ್ಲಿ ಪ್ರಚಾರ ಮಾಡಿದ್ದರು. ಆದರೆ, ಈಗ ಸುಮಲತಾ ಬಿಜೆಪಿಯಲ್ಲಿದ್ದರೂ ದರ್ಶನ್ ಕಾಂಗ್ರೆಸ್ ಪರ ಪ್ರಚಾರಕ್ಕೆ ಹೋಗುತ್ತಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಈ ಹಿಂದೆ ಅಮ್ಮ ಬಾವಿಗೆ ಬೀಳು ಎಂದರು ನಾನು ಬೀಳಲು ಸಿದ್ದ ಎಂದು ಹೇಳಿದ್ದ ದರ್ಶನ್ ಯು ಟರ್ನ್ ಹೊಡೆದಿದ್ದಾರಾ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಮಂಡ್ಯ: ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮ್ಮದ್ ಇಬ್ರಾಹಿಂ ಪೊಲೀಸರ ವಿಚಾರಣೆ ವೇಳೆ ಶಾಕಿಂಗ್ ವಿಚಾರ ಬಾಯ್ಬಿಟ್ಟಿದ್ದಾನೆ.…
ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್ ಆದ ಕಬ್ಬನ್ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…
13 ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…
ಕುವೈತ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್ ಮಿಶಾಲ್…
ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…