ಶ್ರೀರಂಗಪಟ್ಟಣ : ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಇಲ್ಲಿನ ತಾಲ್ಲೂಕು ಕಚೇರಿ ಎದುರು ಒಂದು ತಾಸಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ ರೈತರು, ರಾಜ್ಯ ಸರ್ಕಾರದ ವಿರುದ್ಧ ಸಾಲು ಸಾಲು ಘೋಷಣೆಗಳನ್ನು ಕೂಗಿದರು.
ಬಿಜೆಪಿ ತಾಲ್ಲೂಕು ಅಧ್ಯಕ್ಷ ಪಿಹಳ್ಳಿ ರಮೇಶ್ ಮಾತನಾಡಿ, ಭತ್ತ ಮತ್ತು ಮೆಕ್ಕೆ ಜೋಳ ಕಟಾವು ಶುರುವಾಗಿದ್ದರೂ ಧಾನ್ಯ ಖರೀದಿ ಕೇಂದ್ರ ತೆರೆದಿಲ್ಲ. ಮೆಕ್ಕೆ ಜೋಳ ಮುಗ್ಗಲು ಹಿಡಿದು ರೈತರು ನಷ್ಟ ಅನುಭವಿಸುತ್ತಿದ್ದಾರೆ. ರೈತರ ಪ್ರತಿಭಟನೆ ಸಂದರ್ಭದಲ್ಲಿ ಮುಧೋಳದಲ್ಲಿ ೮೪ ಟ್ರಾಕ್ಟರ್‌ಗಳು ಸುಟ್ಟು ಹೋಗಿ, ಮೂರು ವಾರ ಕಳೆದರೂ ಸಂತ್ರಸ್ತ ರೈತರಿಗೆ ಪರಿಹಾರ ನೀಡಿಲ್ಲ. ಹೈನುಗಾರರಿಗೆ ಹಾಲಿನ ಪ್ರೋತ್ಸಾಹ ಧನ ನೀಡಲು ಸರ್ಕಾರ ಮೀನ ಮೇಷ ಎಣಿಸುತ್ತಿದೆ. ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿ: ಯುವಪೀಳಿಗೆ ಉದ್ಯಮಿಗಳಾಗುವತ್ತ ಹೆಚ್ಚು ಗಮನ ಹರಿಸಬೇಕು : ಸಚಿವ ಎನ್.ಚಲುವರಾಯಸ್ವಾಮಿ ಸಲಹೆ
ಪಕ್ಷದ ಮುಖಂಡ ಕೆ.ಎಸ್.ನಂಜುಂಡೇಗೌಡ ಮಾತನಾಡಿ, ರಾಜ್ಯ ಸರ್ಕಾರ ಕಬ್ಬಿಗೆ ಒಂದೊಂದು ಜಿಲ್ಲೆಯಲ್ಲಿ ಒಂದೊಂದು ದರ ನಿಗದಿ ಮಾಡಿದೆ. ಈ ತಾರತಮ್ಯ ಸರಿಪಡಿಸಿ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು. ರಾಜ್ಯದಲ್ಲಿ ಹಲವು ದಿನಗಳಿಂದ ಕುರ್ಚಿಗಾಗಿ ಗುದ್ದಾಟ ನಡೆಯುತ್ತಿದೆ. ಆಡಳಿತ ಯಂತ್ರ ಕುಸಿದಿದೆ. ಅಭಿವೃದ್ಧಿ ಕೆಲಸಗಳು ಸಂಪೂರ್ಣ ಸ್ಥಗಿತಗೊಂಡಿವೆ. ಸರ್ಕಾರಿ ಕಚೇರಿಗಳು ಭ್ರಷ್ಟಾಚಾರದ ಕೂಪಗಳಾಗಿವೆ. ಜನ ಸಾಮಾನ್ಯರ ಕಷ್ಟ ಕೇಳುವವರೇ ಇಲ್ಲದಂತಾಗಿದೆ ಎಂದು ದೂರಿದರು.
ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಹೊಸಹಳ್ಳಿ ಮಹದೇವು, ನಗರ ಘಟಕದ ಅಧ್ಯಕ್ಷ ಜಿ.ಇ. ಸುಧಾಕರ್, ಮುಖಂಡರಾದ ಶಾಮಿಯಾನ ಪುಟ್ಟರಾಜು, ಪುಟ್ಟರಾಮು, ಉಮೇಶ್ ಕುಮಾರ್, ಹೇಮಂತಕುಮಾರ್, ಕುಮಾರ್, ಕಿರಣ್‌ಸಿಂಗ್, ಅಭಿಷೇಕ್, ಸುನಿಲ್, ಪಾಲಹಳ್ಳಿ ಟೆಂಪೋ ಪ್ರಕಾಶ್, ಪುರಸಭೆ ಮಾಜಿ ಸದಸ್ಯರಾದ ಗಂಜಾಂ ಶಿವು, ಎಸ್.ಟಿ.ರಾಜು, ಮಹದೇವಸ್ವಾಮಿ, ಚಂದ್ರು, ದರಸಗುಪ್ಪೆ ಸುರೇಶ್, ಹೊಸೂರು ಶಿವರಾಜು, ಕೆಂಪೇಗೌಡ, ರಾಮಕೃಷ್ಣ, ಮಂಜುನಾಥ್, ರಘು, ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…