ಮಂಡ್ಯ

ಡಿ.5 ರಿಂದ ಮಂಡ್ಯದಲ್ಲಿ ಕೃಷಿ ಮೇಳ : 5 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ

ಮಂಡ್ಯ : ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವತಿಯಿಂದ ಡಿಸೆಂಬರ್ 5 ರಿಂದ 7 ರವರೆಗೆ ಆಯೋಜಿಸಲಾಗಿರುವ ಕೃಷಿ ಮೇಳ 2025 ರಲ್ಲಿ ಸುಮಾರು ಐದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಹರಿಣಿ ಕುಮಾರ್ ಹೇಳಿದರು.

ವಿ.ಸಿ.ಫಾರಂ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯಕ್ಕೆ ತನ್ನದೇ ಆದ ಪ್ರಾತಿನಿದ್ಯ ಇದೆ. ಈವರೆಗೆ ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದಿಂದ ಭತ್ತದಲ್ಲಿ 45 ತಳಿಗಳು, 3 ಹೈಬ್ರೀಡ್ ಗಳು, 50 ತಾಂತ್ರಿಕತೆಗಳು, ರಾಗಿಯಲ್ಲಿ 37 ತಳಿಗಳು, ಕಬ್ಬಿನಲ್ಲಿ 17 ತಳಿಗಳು ಮತ್ತು 20 ತಂತ್ರಜ್ಞಾನಗಳು, ಮುಸುಕಿನ ಜೋಳದಲ್ಲಿ ನಾಲ್ಕು ತಳಿಗಳು ಮೇವಿನ ಬೆಳೆಗಳಲ್ಲಿ ನಾಲ್ಕು ತಳಿಗಳು, ಸೂರ್ಯಕಾಂತಿ ಸಂಕಿರಣ ತಿಳಿ (ಕೆ.ಬಿ.ಎಸ್.ಹೆಚ್-88) ಚಾಮರಾಜನಗರ ಕಪ್ಪು ಅರಿಶಿಣದ ತಳಿ, ಅರಿಶಿಣದ ತಳಿಯನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಹೇಳಿದರು.

ರೈತರು ಜೈವಿಕ ಗೊಬ್ಬರಕ್ಕೆ ಹೆಚ್ಚಿನ ಹೊತ್ತು ನೀಡಬೇಕು ಜೈವಿಕ ಗೊಬ್ಬರ ಬಳಸುವುದರಿಂದ ಭೂಮಿಯ ಫಲವತ್ತತೆ ಹೆಚ್ಚುತ್ತದೆ. ರೈತರು ಬಹು ಬೆಳೆ ಕೃಷಿಯನ್ನು ಹೆಚ್ಚು ಮಾಡಬೇಕು. ಬಹುಬೆಳೆ ಕೃಷಿಯಲ್ಲಿ ಶ್ರಮ ಮತ್ತು ಜವಾಬ್ದಾರಿ ಎರಡು ಹೆಚ್ಚಿರುತ್ತದೆ ಜೊತೆಗೆ ಆದಾಯವು ಸಹ ಹೆಚ್ಚು ಲಭಿಸುತ್ತದೆ ಎಂದು ಹೇಳಿದರು.

ಕೃಷಿ ಮೇಳ 2025 ರಲ್ಲಿ ನವೀನ ಕೃಷಿ ತಂತ್ರಜ್ಞಾನಗಳ ಪ್ರದರ್ಶನ, ವಸ್ತು ಪ್ರದರ್ಶನ, ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಪದ್ಧತಿ ಪ್ರಾತ್ಯಕ್ಷಿಕೆಗಳು, ಪಶು ಸಂಗೋಪನೆ ತಾಂತ್ರಿಕತೆಗಳು, ಮೀನು ಕೃಷಿ, ಸಸ್ಯಕ್ಷೇತ್ರ ನಿರ್ವಹಣೆಯಲ್ಲಿ ಪ್ರಮುಖವಾಗಿ ದೇಸಿ ಮತ್ತು ವಿದೇಶಿ ತಳಿಗಳ ಬಗ್ಗೆ ಮಾಹಿತಿ ಮತ್ತು ಮಾರಾಟವನ್ನು ಮಾಡಲಾಗುವುದು, ನಮ್ಮ ಜಿಲ್ಲೆಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ ಕೃಷಿ ಹೊಂಡ ನಿರ್ಮಾಣ ಮಾಡಿ ಮೀನು ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ನಮ್ಮ ಕೇಂದ್ರದಲ್ಲಿ ಅಭಿವೃದ್ಧಿ ಪಡಿಸಿದ ತಳಿಗಳನ್ನು ರಾಷ್ಟ್ರಮಟ್ಟದಲ್ಲಿ ಬಿಡುಗಡೆಗೊಳಿಸಲಾಗಿದೆ. ದೇಶದ ಪ್ರಥಮ ಹೈಬ್ರಿಡ್ ಬತ್ತದ ತಳಿಗೆ – (ಕೆ.ಆರ್.ಹೆಚ್-2) ಇಂದಿಗೂ ದೇಶದಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಬೇಡಿಕೆ ಇದೆ. ವಿ.ಸಿ ಫಾರಂ ನಿಂದಲೆ ಅಭಿವೃದ್ಧಿ ಪಡಿಸಿದ ಕಬ್ಬಿನ ತಳಿಯಾದ (ವಿ.ಸಿ.ಎಫ್-0517) ಅನ್ನು ಬಾಹುಬಲಿ ಎಂದು ಕರೆಯಲಾಗುತ್ತದೆ. ಸದರಿ ಕಬ್ಬಿನ ತಳಿಯೂ ಹೆಚ್ಚಿನ ಸಕ್ಕರೆ ಅಂಶ ಹೊಂದಿದ್ದು ರೈತರಿಗೆ ಹೆಚ್ಚು ಇಳುವರಿ ನೀಡಿ ಆದಾಯ ಹೆಚ್ಚಿಸುತ್ತಿದೆ. ಕರ್ನಾಟಕದಲ್ಲಲದೆ ನೆರೆ ರಾಜ್ಯಗಳಲ್ಲೂ ಸದರಿ ಕಬ್ಬಿನ ತಳಿಯ ಬೇಡಿಕೆ ಹೆಚ್ಚಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಮಾಜಿ ಶಾಸಕ ಆರ್‌.ವಿ.ದೇವರಾಜ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಐದು ಜಿಲ್ಲೆಗಳ ರೈತರನ್ನು ಒಳಗೊಂಡಂತೆ ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯ ಆಯೋಜಿಸಿರುವ “ಕೃಷಿ ಮೇಳ 2025” ಅನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ ಹಾಗೂ ಕೃಷಿ ಮೇಳದ ಎರಡನೇ ದಿನದಂದು ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವರಾದ ಕುಮಾರ ಸ್ವಾಮಿ ಅವರು ಭಾಗವಹಿಸಲಿದ್ದಾರೆ. ಮೂರನೇ ದಿನದಂದು ಜೆ.ಎಸ್.ಎಸ್ ಮಠದ ಸ್ವಾಮಿಗಳು ಭಾಗವಹಿಸಲಿದ್ದಾರೆ ಎಂದರು ಮಾಹಿತಿ ನೀಡಿದರು.

ಮೇಳದಲ್ಲಿ ಹೈಟೆಕ್ ತೋಟಗಾರಿಕೆ ಪ್ರಾತ್ಯಕ್ಷಿಕೆ ಸುಧಾರಿತ ಮೇವಿನ ತಳಿಗಳು ಮತ್ತು ತಾಂತ್ರಿಕತೆಗಳು, ಸಿರಿಧಾನ್ಯಗಳ ಮೇಳ, ಫಲಪುಷ್ಪ ಪ್ರದರ್ಶನ, ರಾಸಾಯನಿಕ ಮುಕ್ತ ಬೆಲ್ಲ ತಯಾರಿಕೆ, ದೇಶಿ ರಾಸುಗಳ ಪ್ರದರ್ಶನ, ಔಷಧಿ ಸಸ್ಯಗಳ ಪ್ರಾತ್ಯಕ್ಷಿಕೆ, ಜೈವಿಕ ಇಂಧನದ ತಂತ್ರಜ್ಞಾನಗಳು, ಮಾರುಕಟ್ಟೆಯ ತಂತ್ರಗಳು, ಕೃಷಿ ಅರಣ್ಯ, ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆಗಳ, ಕೃಷಿ ಹವಾಮಾನ ನಿರ್ವಹಣೆ, ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಮತ್ತು ಸಿರಿಧಾನ್ಯಗಳ ಮೌಲ್ಯವರ್ಧನೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.

ಸದರಿ ಮೇಳದಲ್ಲಿ ವಿಸ್ಮಯಕಾರಿ ಕ್ರೀಟ ಪ್ರಪಂಚ, ಜೇನು ಕೃಷಿ, ಹೈಟೆಕ್ ನರ್ಸರಿ ಪ್ರದರ್ಶನ ಮತ್ತು ಮಾರಾಟ ರೈತರು ಬೆಳೆದ ಉತ್ಪನ್ನ ಮತ್ತು ಕೈಗೊಂಡ ಮೌಲ್ಯವರ್ಧನೆಯನ್ನು ನೇರ ಗ್ರಾಹಕರಿಗೆ ಮಾರಾಟ ಮಾಡಲು ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗುತ್ತದೆ. ಕೃಷಿ ಯಾಂತ್ರಿಕೀಕರಣ ಪ್ರದರ್ಶನ ಮತ್ತು ಮಾರಾಟವನ್ನು ಮಾಡಲಾಗುವುದು ಎಂದು ತಿಳಿಸಿದರು.

ದೇಶಿ ಔಷಧಿ ಗಿಡಗಳನ್ನು ರೈತರೊಂದಿಗೆ ಒಡಂಬಡಿಕೆ ಮಾಡಿಕೊಂಡು ಅವುಗಳ ಅಭಿವೃದ್ಧಿ ಪಡಿಸಿ ರೈತರಿಗೆ ಮಾರಾಟಕ್ಕೆ ಸಹಾಯ ಮಾಡಲಾಗುವುದು. ಯುವಕರು ಕೃಷಿಯ ಕಡೆ ಹೆಚ್ಚು ಹೊತ್ತು ನೀಡಬೇಕು. ಕೆಲಸವನ್ನರಸಿ ನೆರೆ ರಾಜ್ಯ, ಜಿಲ್ಲೆಗಳಿಗೆ ಹೋಗುವುದನ್ನು ಬಿಟ್ಟು ಕೃಷಿಯಲ್ಲಿ ಬಂಡವಾಳ ಹೂಡಿ ಆದಾಯ ಗಳಿಸಬಹುದು ಎಂದು ಹೇಳಿದರು.

ಸಾಧಕರಿಗೆ ಸನ್ಮಾನ
ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸಮ್ಮಾನ ಮಾಡಲಾಗುವುದು ಐದು ಜಿಲ್ಲೆಗಳಿಂದ ಒಟ್ಟು ಹತ್ತು ಜನ ಜಿಲ್ಲಾಮಟ್ಟದ ಪ್ರಗತಿಪರ ರೈತರಿಗೆ ಪ್ರಶಸ್ತಿ ಮತ್ತು 55 ಯುವ ರೈತರಿಗೆ ತಾಲ್ಲೂಕು ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಕೃಷಿ ಮೇಳದಲ್ಲಿ 350 ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ನೆರೆ ಜಿಲ್ಲೆಗಳಿಂದ ಕೃಷಿ ಮೇಳಕ್ಕೆ ಬರುವ ಆಸಕ್ತ ರೈತರಿಗೆ ಆಯಾ ಐದು ಜಿಲ್ಲೆಯ ತಾಲೂಕು ಕೇಂದ್ರಗಳಿಂದ ವಾಹನ ವ್ಯವಸ್ಥೆ ಕಲ್ಪಿಸಲು ಮಾತನಾಡಲಾಗಿದೆ. ಮಂಡ್ಯದಿಂದ ವಿಸಿ ಫಾರ್ಮ್ ಗೆ ಬರಲು ಪ್ರತಿ 15 ನಿಮಿಷಕ್ಕೆ ಒಂದು ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಟ್ರಾಫಿಕ್ ನಿರ್ವಹಣೆ ಮಾಡಲು ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ.ಪಿ.ಎಸ್. ಫಾತಿಮಾ, ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯದ ಸಂಶೋಧನಾ ನಿರ್ದೇಶಕರಾದ ಡಾ.ಜಿ.ಎಂ. ದೇವಗಿರಿ. ಕೃಷಿ ವಿಶ್ವವಿದ್ಯಾನಿಲಯದ ಡೀನ್ ಮುನಿಸ್ವಾಮಿ ಗೌಡ, ಸಹ ಸಂಶೋಧನಾ ನಿರ್ದೇಶಕರು ಮತ್ತು ಪ್ರಚಾರ ಸಮಿತಿಯ ಅಧ್ಯಕ್ಷರಾದ ಡಾ. ಬಿಎಸ್ ಬಸವರಾಜು. ವಿಸ್ತರಣಾ ನಿರ್ದೇಶಕರಾದ ಡಾ.ಎ.ಡಿ ರಂಗನಾಥ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

7 mins ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

26 mins ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

35 mins ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

49 mins ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

1 hour ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

1 hour ago