ಮಂಡ್ಯ: ಅರವಿಂದ್ ಕೇಜ್ರಿವಾಲ್ ದುಡುಕಿನ ನಿರ್ಧಾರದಿಂದಲೇ ಈ ಚುನಾವಣೆಯಲ್ಲಿ ಸೋಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿದ್ದು, ಬಿಜೆಪಿ ಭರ್ಜರಿ ಜಯಗಳಿಸಿದೆ. ಚುನಾವಣೆಯಲ್ಲಿ ಎಎಪಿ ಘಟಾನುಘಟಿ ನಾಯಕರನ್ನೇ ಬಿಜೆಪಿ ಅಭ್ಯರ್ಥಿಗಳು ಮಕಾಡೆ ಮಲಗುವಂತೆ ಮಾಡಿದ್ದಾರೆ.
ಈ ಫಲಿತಾಂಶದ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು, ದೆಹಲಿ ಚುನಾವಣೆ ಫಲಿತಾಂಶ ವಿಶೇಷ ಏನಲ್ಲ. ಇಂಡಿಯಾ ಒಕ್ಕೂಟದ ಜೊತೆ ಆಪ್ ಇರಬೇಕಿತ್ತು. ಆದರೆ ಅರವಿಂದ್ ಕೇಜ್ರಿವಾಲ್ ದುಡುಕಿನ ನಿರ್ಧಾರ ತೆಗೆದುಕೊಂಡರು. ಪರಿಣಾಮ ಈ ಚುನಾವಣೆಯಲ್ಲಿ ಎಎಪಿ ಹಾಗೂ ಕಾಂಗ್ರೆಸ್ಗೆ ಸೋಲಾಗಿದೆ. ಆಪ್ ಹಾಗೂ ಕಾಂಗ್ರೆಸ್ ನಿರ್ಧಾರದಿಂದ ಬಿಜೆಪಿ ಈ ಚುನಾವಣೆಯಲ್ಲಿ ಹೆಚ್ಚು ಲಾಭ ಪಡೆದುಕೊಂಡಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತನಿಗೂ ನೋಟಿಸ್ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್ ಮುಖಂಡ ಇನಾಯತ್ ಅಲಿ ಅವರಿಗೆ…
ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ…
ಬೆಂಗಳೂರು: 2026ರ ಐಪಿಎಲ್ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್ಸಿಎ ಚುನಾವಣೆ ಮತದಾನದ ವೇಳೆ…
ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…
ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…