ಮಂಡ್ಯ: ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಅನೇಕ ಬದಲಾವಣೆಯನ್ನು ತರುವ ಮೂಲಕ ಕಂದಾಯ ಇಲಾಖೆಯಲ್ಲಿ ಸುಧಾರಣೆ ತರಲಾಗಿದೆ. ಜನಸಾಮಾನ್ಯರ ಸಮಸ್ಯೆಯನ್ನು ಬಗೆಹರಿಸಲು ಶ್ರಮಿಸುವ ಮೂಲಕ ಸ್ಪಂದಿಸಿದ್ದೇವೆ. ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತೆರಳಿ ಮಾಡಿಕೊಡಲಾಗುತ್ತಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮನೆ ಮನೆ ತೆರಳಿ ಖಾತೆ ಮಾಡಬೇಕು ಎಂಬ ಆದೇಶ ಹೊರಡಿಸಿದ್ದಾರೆ. ಹಲವಾರು ದಿನಗಳಿಂದ ಬಾಕಿಯಿದ್ದ ಒಟ್ಟು 15,000 ಪ್ರಕರಣಗಳಲ್ಲಿ 13,000 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಕೇವಲ 1 ವಾರದಲ್ಲಿಯೇ 416 ಪ್ರಕರಣಗಳ ಸರ್ವೇ ಮಾಡಲಾಗಿದೆ. ಜೊತೆಗೆ ಪೌತಿ ಖಾತೆಗಳನ್ನು ಸರಿಯಾದ ರೀತಿಯಲ್ಲಿ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿರುವ ಕಂದಾಯ ಇಲಾಖೆಯ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುತ್ತಿದೆ. 1960- 70ರಲ್ಲಿ ಮಂಜೂರಾಗಿರುವ ಕಂದಾಯ ಇಲಾಖೆಯ ದರಖಾಸ್ತು ಪೋಡಿ ದುರಸ್ಥಿ ಸರಳೀಕೃತ ಕಾರ್ಯದ ಹೊಸ ಪಹಣೆ ಮತ್ತು ಪೋಡಿ ದಾಖಲೆಗೆ ಸಂಬಂಧಪಟ್ಟಂತೆ ಶಾಶ್ವತ ದಾಖಲೆಗಳನ್ನು ನೀಡಲಾಗುತ್ತಿದೆ ಎಂದರು.
ನಮ್ಮ ಸರ್ಕಾರವು ಜನರ ಮನೆಯ ಬಾಗಿಲಿಗೆ ಅನೇಕ ಯೋಜನೆಗಳನ್ನು ನೀಡುವ ಮೂಲಕ ಅನುಕೂಲ ಮಾಡುತ್ತಿದೆ. ಸರ್ಕಾರದ ಪಂಚ ಗ್ಯಾರಂಟಿಗಳಾದ ಶಕ್ತಿ ಯೋಜನೆ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಯುವ ನಿಧಿ, ಅನ್ನಭಾಗ್ಯ ಯೋಜನೆಗಳಿಂದ ಸಾರ್ವಜನಿಕರು ಸದುಪಯೋಗ ಪಡೆಯುತ್ತಿದ್ದಾರೆ ಎಂದರು.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…