ಮಂಡ್ಯ: ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ಹೇಳಿಕೊಂಡು ಬೆಂಗಳೂರಿನ ಚಿನ್ನದಂಗಡಿ ಮಾಲಕಿಗೆ ಚಿನ್ನ ಖರೀದಿಸಿ ವಂಚನೆ ಮಾಡಿದ್ದ ಪ್ರಕರಣದ ಬೆನ್ನಲ್ಲೇ ಈಗ ಐಶ್ವರ್ಯಾ ಗೌಡ ವಿರುದ್ಧ ಅನೇಕ ಪ್ರಕರಣಗಳು ದಾಖಲಾಗಿವೆ.
ಬೆಂಗಳೂರಿನ ಬಳಿಕ ಈಗ ಮಂಡ್ಯದಲ್ಲಿಯೂ ಐಶ್ವರ್ಯ ಗೌಡ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.
ರವಿಕುಮಾರ್ ಹಾಗೂ ಪೂರ್ಣಿಮಾ ಎಂಬುವವರು ಐಶ್ವರ್ಯ ಗೌಡ ವಿರುದ್ಧ ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಆರೋಪಿ ಐಶ್ವರ್ಯ ಗೌಡಗೆ ಪೊಲೀಸರು ನೋಟಿಸ್ ನೀಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಐಶ್ವರ್ಯ ಗೌಡ ಹಣ ಡಬಲ್ ಮಾಡಿಕೊಡುವ ಆಸೆ ತೋರಿಸಿ 55 ಲಕ್ಷ ನಗದು ಹಾಗೂ 100 ಗ್ರಾಂ ಚಿನ್ನಾಭರಣ ಪಡೆದು ವಂಚಿಸಿದ್ದಾಳೆ ಎಂದು ರವಿಕುಮಾರ್ ಹಾಗೂ ಪೂರ್ಣಿಮಾ ದೂರು ದಾಖಲಿಸಿದ್ದಾರೆ. ಈ ದೂರಿನ ಹಿನ್ನೆಲೆಯಲ್ಲಿ ಮಂಡ್ಯ ಪೊಲೀಸರು ಸಾಕ್ಷಿ ಕಲೆ ಹಾಕುತ್ತಿದ್ದು, ಐಶ್ವರ್ಯ ಗೌಡಗೆ ಇಂದು ಅಥವಾ ನಾಳೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುವ ಸಾಧ್ಯತೆಯಿದೆ.
ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ (WPL) ಟಿ20 ಕ್ರಿಕೆಟ್ ಟೂನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್…
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧಿಯಾಗಿದ್ದು ನಟಿ ರನ್ಯಾರಾವ್ ಅವರು 2023ರ ಜೂನ್‌ನಿಂದ ಇಲ್ಲಿಯವರೆಗೂ 52 ಬಾರಿ ದುಬೈಗೆ ಹೋಗಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಸಭ್ಯತೆ ಮೀರಿ ನಡೆದುಕೊಳ್ಳಬಾರದು ಎಂದು ಶಾಸಕ ತನ್ವೀರ್ ಸೇಠ್ ಸಲಹೆ ನೀಡಿದ್ದಾರೆ. ರಾಜ್ಯ…
ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಮತ್ತು ಅರೇಹಳ್ಳಿ ಸುತ್ತ-ಮುತ್ತ ಜನರಿಗೆ ಹಾವಳಿ ನೀಡುತ್ತಿರುವ 3 ಪುಂಡಾನೆಗಳನ್ನು ಪತ್ತೆಹಚ್ಚಲಾಗಿದೆ.…
ಚಾಮರಾಜನಗರ: ಬೀದಿ ನಾಯಿ ದಾಳಿಗೆ ಜಿಂಕೆ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕಾಳನಹುಂಡಿ ಗ್ರಾಮದ ಆಂಜನೇಯ ಸ್ವಾಮಿ…
ಮೈಸೂರು: ನನಗೆ ಸಿಎಂ ಹುದ್ದೆ ಕೊಟ್ಟರೆ ಜವಾಬ್ದಾರಿಯಿಂದ ನಿರ್ವಹಿಸುತ್ತೇನೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಬಗ್ಗೆ…