ಮಂಡ್ಯ

ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಕನ್ನಡ ಮನಸ್ಸುಗಳೆಲ್ಲಾ ಒಂದಾಗಬೇಕು: ಎನ್.ಚಲುವರಾಯಸ್ವಾಮಿ

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಡಿ.20 ರಿಂದ 22ರವರಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯಲು ಕನ್ನಡದ ಎಲ್ಲಾ ಮನಸ್ಸುಗಳು ಒಂದಾಗಿ ಶ್ರಮಿಸಬೇಕಿದೆ ಎಂದು ಮಂಡ್ಯ ಜಿಲ್ಲಾ ಉಸ್ತವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು.

ವಿಕಾಸ ಸೌಧದ ತಮ್ಮ ಕೊಠಡಿಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಂಡ್ಯ ಜಿಲ್ಲೆಯ ಸೊಗಡಿನ ಜೊತೆಗೆ ರಾಜ್ಯದ ಬದುಕನ್ನು ಬೆಸೆಯುವ ಸ್ವರೂಪದಲ್ಲಿ ಕಾರ್ಯಕ್ರಮ ಆಯೋಜಿಸಬೇಕಿದೆ. ಇದರಲ್ಲಿ ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳು ಸಂಘ ಸಂಸ್ಥೆಗಳು, ಸಾಹಿತಿಗಳು, ಚಿಂತಕರು, ಅಧಿಕಾರಿ ಸಿಬ್ಬಂದಿ ಹೆಚ್ಚಿನ ಕಾಳಜಿ, ಪರಿಶ್ರಮ ವಹಿಸಬೇಕು ಎಂದರು.

ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆರ್ಥಿಕ ಇಲಾಖೆಯಿಂದ 25 ಕೋಟಿ ರೂ ಬಿಡುಗಡೆಗೆ ಶಿಫಾರಸು ಮಾಡಿದೆ. ಆದಷ್ಟು ಅದರ ಇತಿ ಮಿತಿಯೊಳಗೆ ವೆಚ್ಚ ನಿಯಂತ್ರಣ ಮಾಡಿಕೊಳ್ಳುವುದು ಸೂಕ್ತ ಎಂದು ಚಲುವರಾಯಸ್ವಾಮಿ ಅವರು ಸಲಹೆ ನೀಡಿದರು.

ಸಭೆಯಲ್ಲಿ ವಿವಿಧ ಉಪ ಸಮಿತಿಗಳ ಅಧ್ಯಕ್ಷರಾದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಅಧಿಕಾರಿಗಳ ಅಭಿಪ್ರಾಯ, ಸಮಿತಿಗಳ ತೀರ್ಮಾನಗಳನ್ನು ಆಲಿಸಿದ ಸಚಿವರು ಸಾಹಿತ್ಯ-ಸಂಭ್ರಮಕ್ಕೆ ಯಾವುದೇ ಕೊರತೆಯಾಗದಂತೆ ಸಂಘಟನೆ ಮಾಡಲು ಕರೆ ನೀಡಿದರು.

ಮಂಡ್ಯ ಜಿಲ್ಲೆಯಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಬೇಕು. ವ್ಯಾಪಕ ಪ್ರಚಾರ, ಉತ್ತಮ ಅಲಂಕಾರ ಮಾಡಬೇಕು. ಆಕರ್ಷಕ ಮೆರವಣಿಗೆ, ಅರ್ಥಪೂರ್ಣ ವಿಚಾರಗೋಷ್ಠಿ, ಕಾರ್ಯಕ್ರಮಗಳು, ಮುದ್ದೆ ಬಸ್ಸಾರು ಸೇರಿದಂತೆ ಸ್ಥಳೀಯ ಆಹಾರ ಹಾಗೂ ಉತ್ತರ ಕರ್ನಾಟಕದ ತಿನಿಸಿಸುಗಳ ಸಮಿಶ್ರಣಗೊಂಡ ಊಟೋಪಚಾರ ವ್ಯವಸ್ಥೆ ಮಾಡುವಂತೆ ಸಚಿವ ಚಲುವರಾಯಸ್ವಾಮಿ ಸಲಹೆ ನೀಡಿದರು.

ಸಾಹಿತ್ಯ ಸಮ್ಮೇಳನದ ಮೊದಲೆರಡು ದಿನ ಸಂಜೆಯ ನಂತರ ಅತ್ಯುತ್ತಮ ಸಾಂಸ್ಕೃತಿಕ ಕಾರ್ಯಮಗಳನ್ನು ಆಯೋಜಿಸಬೇಕು. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಸಮ್ಮೆಳನಕ್ಕೆ ವಿಶೇಷ ಬಸ್ ಸಂಪರ್ಕ ವ್ಯವಸ್ಥೆ ಮಾಡಬೇಕು ಎಂದು ಸಚಿವ ಚಲುವರಾಯಸ್ವಾಮಿ ನಿರ್ದೇಶನ ನೀಡಿದರು.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿಯ ಅಧ್ಯಕ್ಷರಾದ ರಮೇಶ ಬಂಡಿಸಿದ್ದೇಗೌಡ, ಶಾಸಕರಾದ ನರೇಂದ್ರಸ್ವಾಮಿ, ರವಿಕುಮಾರ್ (ಗಣಿಗ), ಉದಯ್ ಗೌಡ, ದರ್ಶನ್ ಪುಟ್ಟಣ್ಣಯ್ಯ, ವಿಧಾನಸಭಾ ಪರಿಷತ್ ಸದಸ್ಯರಾದ ಮಧು ಮಾದೇಗೌಡ, ದಿನೇಶ್ ಗೂಳಿಗೌಡ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಾದ ನಾಡೋಜ ಮಹೇಶ್ ಜೋಷಿ, ಮಂಡ್ಯ ಜಿಲ್ಲಾಧಿಕಾರಿ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮೀರಾ ಶಿವಲಿಂಗಯ್ಯ ಮತ್ತಿತರರು ಉಪಸ್ಥಿತರಿದ್ದು, ಸಮ್ಮೇಳನದ ಯಶಸ್ವಿ ಸಂಘಟನೆ ಕುರಿತು ಅಮೂಲ್ಯ ಸಲಹೆಗಳನ್ನು ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…

2 hours ago

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

3 hours ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

4 hours ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

4 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

6 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

6 hours ago