ಮಂಡ್ಯ

ಗಗನಚುಕ್ಕಿ ಜಲಪಾತೋತ್ಸವಕ್ಕೆ ಸಕಲ ಸಿದ್ದತೆ: ಶಾಸಕ ಪಿ.ಎಂ ನರೇಂದ್ರಸ್ವಾಮಿ

ಮಂಡ್ಯ: ಪ್ರಕೃತ್ತಿ ದತ್ತವಾಗಿ ಚಲುವನ್ನು ಹೊಂದಿರುವ ಗಗನಚುಕ್ಕಿಗೆ ಜನರನ್ನು ಸೆಳೆಯಲು ವಿಜೃಂಭಣೆಯಿಂದ ಜಲಪಾತೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 14 ಹಾಗೂ 15 ರಂದು ಹಮ್ಮಿಕೊಳ್ಳಲಾಗಿದೆ.

ರೊಟ್ಟಿಕಟ್ಟೆಯಿಂದ ಎರಡು ರಸ್ತೆ ಬದಿಗಳು ಮದುವಣಗಿತ್ತಿಯ ರೂಪದಲ್ಲಿವ ಅಲಂಕೃತವಾಗಿ ಜನರನ್ನು ಜಲಪಾತೋತ್ಸವಕ್ಕೆ ಆತ್ಮೀಯವಾಗಿ ಆಹ್ವಾನಿಸುತ್ತಿದೆ.

ಜಲಪಾತೋತ್ಸವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಹೆಚ್ಚು ಜನರು ಭಾಗವಹಿಸುವಂತೆ ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಪತ್ರಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸೆಪ್ಟೆಂಬರ್ 14 ರಂದು ಸಂಜೆ 6 ಗಂಟೆಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.

ಸ್ಪೆಷಲ್ ರೂಟ್ ಗಳಲ್ಲಿ ಬಸ್ ಮಳವಳ್ಳಿ ತಾಲ್ಲೂಕಿನ ವಿವಿಧ ಭಾಗಗಳಿಂದ ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮಕ್ಕೆ ಸಾರ್ವಜನಿಕರು ಬಂದು ಹೋಗಲು ಕೆ‌ಎಸ್.ಆರ್.ಟಿ.ಸಿ ವತಿಯಿಂದ ವಿಶೇಷ ಬಸ್ ರೂಟ್ ಗಳ ವ್ಯವಸ್ಥೆ ಮಾಡಲಾಗಿದೆ. ರೊಟ್ಟಿಕಟ್ಟೆಯಿಂದ ಕಾರ್ಯಕ್ರಮ ನಡೆಯುವ ಸ್ಥಳಗಳವರೆಗೆ ಸಾರ್ವಜನಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದರು.

ವಿಶೇಷ ದೀಪ ಅಲಂಕಾರ ಸೆಪ್ಟೆಂಬರ್‌ 14 ಹಾಗೂ 15 ರಂದು ಜಲಪಾತಕ್ಕೆ ವಿಶೇಷ ದೀಪಾಲಂಕಾರ ಹಾಗೂ ಲೇಜರ್ ಶೋ ವ್ಯವಸ್ಥೆ. ಬರುವ ಸಾರ್ವಜನಿಕರಿಗೆ ಉಚಿತ ಉಪಹಾರ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.

ಬೆಳದಿಂಗಳ ಕಾರ್ಯಕ್ರಮ ಪ್ರಕೃತಿ ತಾಣವಾದ ಗಗನಚುಕ್ಕಿ ಜಲಪಾತದ ಮುಂಭಾಗ ದೊಡ್ಡದಾದ ಮೆಟ್ಟಿಲು ಹಾಗೂ ಆವರಣ ನಿರ್ಮಾಣವಾಗುತ್ತಿದ್ದು, ಇಲ್ಲಿ ಮುಂದಿನ ದಿನಗಳಲ್ಲಿ ಸಾರ್ವಜನಿಕರು ಹಾಗೂ ಶಾಲಾ ಕಾಲೇಜಿನವರು ವಿಶೇಷ ಬೆಳದಿಂಗಳ ಕಾರ್ಯಕ್ರಮ ಹಮ್ಮಿಕೊಳ್ಳಲು ಅವಕಾಶ ನೀಡಲಾಗುವುದು ಎಂದರು‌.

ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
ಇದಲ್ಲದೇ ಸುತ್ತ ನೀರಿರುವ ಐಲ್ಯಾಂಡ್ ಪ್ರದೇಶ ಗಗನ ಚುಕ್ಕಿಯಲ್ಲಿದ್ದು, ಇಲ್ಲಿ ಸುತ್ತ ವಾಕಿಂಗ್ ಪಾಥ್ ನಿರ್ಮಿಸಲು ಟನಲ್ ಅಕ್ವೇರಿಯಂ, ಸೇರಿದಂತೆ ಜಲ ಕ್ರೀಡೆ ಸಹ ನಡೆಸಲು ಅವಕಾಶವಿದ್ದು, ಈ ಯೋಜನೆಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಸ್ಥಳೀಯ ಕಲಾವಿದರಿಗೂ ಅವಕಾಶ

ಗಗನಚಯಕ್ಕಿ ಜಲಪಾತೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೂ ಅವಕಾಶ ನೀಡಲಾಗಿದೆ. ಸೆ.14 ರಂದು ಬೆಳಿಗ್ಗೆ 11 ಗಂಟೆಗೆ ಸಂಕೇತಿಕವಾಗಿ ಕಲಾತಂಡಗಳ ಮೆರವಣಿಗೆಯೊಂದಿಗೆ ಚಾಲನೆ ನೀಡಲಾಗುವುದು. ಎರಡು ದಿನಗಳ ಕಾಲ ಬೆಳಿಗ್ಗೆ 11 ರಿಂದ 2 ರವರೆಗೆ ಸ್ಥಳೀಯ ಕಲಾವಿದರಿಗೆ ಕಾರ್ಯಕ್ರಮ ನೀಡಲಿದ್ದಾರೆ ಎಂದರು.

ಎರಡು ದಿನಗಳು ನಡೆಯುವ ಕಾರ್ಯಕ್ರಮದ ವಿವರ
ಸೆಪ್ಟೆಂಬರ್ 14 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 2 ಗಂಟೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ

ಮದ್ಯಾಹ್ನ 2 ಗಂಟೆಯಿಂದ ಸಂಜೆ 4.30 ಗಂಟೆವರೆಗೆ ನಾಗೇಶ್ ಕಂದೇಕಾಲ ಮತ್ತು (ಕಲಾವತಿ ದಯಾನಂದ್, ಅಜಯ್ ವಾರಿಯರ್, ಜೋಗಿ ಸುನಿತಾ, ಚಿಂತನ್ ವಿಕಾಸ್, ಸುಹನಾ ಸೈಯದ್) ಇವರಿಂದ ಭಾವಗೀತೆಗಳು.

ಸಂಜೆ 4.30 ರಿಂದ 6 ಗಂಟೆವರೆಗೆ ಪ್ರಖ್ಯಾತ ಕಾಮಿಡಿ ಕಿಲಾಡಿಗಳು ಕಲಾವಿದರಿಂದ ಹಾಸ್ಯ ಮನರಂಜನೆ.

ಸಂಜೆ 7 ಗಂಟೆಯಿಂದ ರಾತ್ರಿ 10.30 ರವರೆಗೆ ಮಣಿಕಾಂತ್ ಕದ್ರಿ, ಚಂದನ್ ಶೆಟ್ಟಿ, ಹಂಸಿಕಾ ಅಯ್ಯರ್ ತಂಡದವರಿಂದ ನೃತ್ಯ ಮತ್ತು ಸಂಗೀತ ಕಾರ್ಯಕ್ರಮ.

15 ರಂದು ಭಾನುವಾರ

ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 2 ಗಂಟೆವರೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು,

ಮದ್ಯಾಹ್ನ 2 ರಿಂದ ಸಂಜೆ 4.30 ಗಂಟೆವರೆಗೆ ಪ್ರಖ್ಯಾತ ಜಿ-ಸರಿಗಮಪ ತಂಡದವರಿಂದ ಸಂಗೀತ ಕಾರ್ಯಕ್ರಮ.

ಸಂಜೆ 4.30 ರಿಂದ 6 ಗಂಟೆವರೆಗೆ ಪ್ರಖ್ಯಾತ ಕಲರ್ಸ್-ಗಿಚ್ಚಿ ಗಿಲಿಗಿಲಿ ತಂಡದವರಿಂದ ಹಾಸ್ಯ ಕಾರ್ಯಕ್ರಮ.

6 ರಿಂದ ರಾತ್ರಿ 10.30 ಗಂಟೆವರೆಗೆ ರವಿ ಬಸ್ರೂರ್ ಮತ್ತು ತಂಡದವರಿಂದ ಸಂಗೀತ ರಸ ಸಂಜೆ ಕಾರ್ಯಕ್ರಮಗಳು ನಡೆಯಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಶಾಸಕರ ಅಸಂಬದ್ಧ ಹೇಳಿಕೆ

ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…

1 hour ago

ಓದುಗರ ಪತ್ರ: ಅಮಿತ್‌ ಶಾ ಹೇಳಿಕೆ ಖಂಡನೀಯ

ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…

1 hour ago

ವಾಹನ ಸಂಚಾರಕ್ಕೆ ಸಂಚಕಾರ ತರುತ್ತಿರುವ ಅವರೆಕಾಯಿ ವ್ಯಾಪಾರ

ದಾ.ರಾ. ಮಹೇಶ್‌ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…

2 hours ago

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

  ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…

3 hours ago

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

12 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

12 hours ago