ಮಂಡ್ಯ

ಇವೆಲ್ಲಾ ಸಾಮಾನ್ಯ, ಸಿಎಂ ಕುರ್ಚಿ ಚರ್ಚೆಯಿಂದ ಮಾಧ್ಯಮ ದೂರ ಇರಬೇಕು : ಸಚಿವ.ಚಲುವರಾಯಸ್ವಾಮಿ

ಮಂಡ್ಯ : ರಾಜ್ಯದಲ್ಲಿ ಸಿ.ಎಂ‌. ಕುರ್ಚಿ ಚರ್ಚೆ ವಿಚಾರವನ್ನು ಮಾಧ್ಯಮಗಳು ಕೆಲ ದಿನಗಳು ದೂರ ಇಡಬೇಕು, ರಾಜಕೀಯ ಪಕ್ಷಗಳಲ್ಲಿ ಇದು ಸರ್ವೇ ಸಾಮಾನ್ಯ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಇಂದು ಮಂಡ್ಯ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವ ಸಂಪುಟ ಪುನರಚನೆ ಬಗ್ಗೆ ಸಿ.ಎಂ. ಮಾತನಾಡಿದ್ದಾರೆ ಅಷ್ಟೇ ಪಕ್ಷದ ಹೈಕಮಾಂಡ್ ಈ ಬಗ್ಗೆ ಪರಿಶೀಲಿಸಿ ಸ್ಪಷ್ಟವಾಗಿ ತಿರ್ಮಾನ ಮಾಡುತ್ತದೆ ಎಂದು ಹೇಳಿದರು.

ಇದನ್ನು ಓದಿ : ಮಂಡ್ಯ ಜಿಲ್ಲಾ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದೇನೆ : ಸಚಿವ ಚಲುವರಾಯಸ್ವಾಮಿ

ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ ಸಿಎಂ ಹಾಗೂ ಡಿಸಿಎಂ ಜೊತೆಯಲ್ಲೆ ಇದ್ದಾರೆ. ಆದರೆ ಬಿಜೆಪಿಯಲ್ಲಿ ಯಾವುದೇ ನಾಯಕರಲ್ಲಿ ಸಮನ್ವಯತೆ ಇಲ್ಲ. ಶಾಸಕರು ದೆಹಲಿಗೆ ಹೋಗಿರುವುದು ಸಚಿವ ಸ್ಥಾನದ ಆಕಾಂಕ್ಷೆಯಿಂದ ಎಂದು ಹೇಳಿದರು. ಡಿಕೆ ಶಿವಕುಮಾರ್ ಒಂದು ಬಾರಿ ಸಿ.ಎಂ ಆಗುವ ಅವಕಾಶ ಕೇಳಿದ್ದಾರೆ. ನಮ್ಮ ಪಕ್ಷದ ಹೈ ಕಮಾಂಡ್ ಈ ಬಗ್ಗೆ ತೀರ್ಮಾನ ಮಾಡುತ್ತೆ.

ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ ಎಲ್ಲವು ಸರಿ ಹೋಗುತ್ತೆ. ಶೀಘ್ರವಾಗಿ ಪಕ್ಷದ ಹೈಕಮಾಂಡ್ ಎಲ್ಲವನ್ನು ಸರಿ ಮಾಡುತ್ತಾರೆ. ಸಿಎಂ.ಕುರ್ಚಿ ಕಿತ್ತಾಟ ಎಲ್ಲಾ ಮಾಧ್ಯಮಗಳ ಸೃಷ್ಟಿ ಅಷ್ಟೆ ಎಂದು ಹೇಳಿದರು. ಸಭೆಯಲ್ಲಿ ಮೈಶುಗರ್ ಅಧ್ಯಕ್ಷ ಸಿ ಡಿ ಗಂಗಾಧರ್,ಅಂಜನಾ ಶ್ರೀಕಾಂತ್,ಡಿಸಿಸಿ ಬ್ಯಾಂಕ್ ನಿರ್ದೇಶಕ ಅಶೋಕ್,ವಸಂತ್ ರಾಜ್ ಇದ್ದರು

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

4 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

4 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

4 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

4 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

4 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

6 hours ago