ಮಂಡ್ಯ

ಆಕ್ರಮ ಆಸ್ತಿಗಳಿಕೆ ಆರೋಪ : ಮಂಡ್ಯ ಲೋಕೋಪಯೋಗಿ ಇಇ ಹೆಚ್‌.ಆರ್‌.ಹರ್ಷ ಅಮಾನತು !

ಮಂಡ್ಯ : ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಹೊತ್ತಿರುವ ಮಂಡ್ಯ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್‌ ಹೆಚ್‌ ಆರ್‌ ಹರ್ಷ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಮಾರ್ಚ್‌ ೨೬ರಂದು ಲೋಕೋಪಯೋಗಿ ಇಲಾಖೆಯ ಅಧೀನ ಕಾರ್ಯದರ್ಶಿ ಮುರಳೀಧರನ್‌ ಎಸ್.ತಳ್ಳಿಕೇರಿ ಅವರು ಅಧಿಕಾರಿ ಹರ್ಷ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಕಳೆದ ಜ.೩೦ ರಂದು ಲೋಕಾಯುಕ್ತ ಪೊಲೀಸರು ಅಧಿಕಾರಿ ವಿರುದ್ಧ ದಾಖಲಿಸಿರುವ ಕ್ರಿಮಿನಲ್‌ ಮೊಕದ್ದಮೆಯ ಪ್ರಾಥಮಿಕ ವರದಿಯಲ್ಲಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವುದು ಸಾಬೀತಾಗಿದೆ ಎಂದಿದ್ದಾರೆ.

ಅಧಿಕಾರಿ ಹೆಚ್‌ ಆರ್‌ ಹರ್ಷ ಅವರು ಪರಿಶೀಲನಾ ಅವಧಿಯಲ್ಲಿ ರೂ 1.40ಕೋಟಿ ಆದಾಯ, ರೂ ೧,25,50,336 ಖರ್ಚು,,, ರೂ 14,45,669 ಉಳಿತಾಯ ಹೊಂದಿರುತ್ತಾರೆ. ಆದರೆ ತನಿಖೆ ವೇಳೆ ರೂ 3,32,೮೭,೯೯೭ ಆಸ್ತಿಯಲ್ಲಿ ರೂ 3,18,38,333 ಅಂದರೆ ಆದಾಯಕ್ಕಿಂತ ಶೇ. ೨೨೭.೪೧ರಷ್ಟು ಹೆಚ್ಚುವರಿ ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ಆರೋಪಿಸಿದ್ದಾರೆ.

ಲೋಕಯುಕ್ತ ತನಿಖೆ ಹಿನ್ನಲೆಯಲ್ಲಿ ಅಧಿಕಾರಿ ಹೆಚ್‌ ಆರ್‌ ಹರ್ಷ ಅವರನ್ನು ವಿಚಾರಣೆ ಬಾಕಿ ಇರಿಸಿ ಭ್ರಷ್ಟಚಾರ ಪ್ರತಿಬಂಧಕ ಕಾಯ್ದೆ 1988 ಕಲಂ ೧೩(1) (ಬಿ) ರಡಿ ಕ್ರಿಮಿನಲ್‌ ಮೊಕದ್ದಮೆ ಹಾಗೂ ಇಲಾಖೆ ವಿಚಾರಣೆಯನ್ನು ಬಾಕಿ ಇರಿಸಿ ಕರ್ನಾಟಕ ನಾಗರೀಕ ಸೇವಾ ನಿಯಮಗಳು ೧೯೫೭ರ ನಿಯಮ ೧೦(೧) (ಎಎ) ರನ್ವಯ ತಕ್ಷಣವೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

9 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

9 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

10 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

10 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

10 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

10 hours ago