ಬೆಂಗಳೂರು: ಕೃಷಿ ನವೋದ್ಯಮಗಳ ಪ್ರೋತ್ಸಾಹ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಸದಾ ಸಿದ್ದ ಎಂದು ಕೃಷಿ ಸಚಿವರಾದ ಎನ್ .ಚಲುವರಾಯಸ್ವಾಮಿ ತಿಳಿಸಿದ್ದಾರೆ.
ವಿಕಾಸ ಸೌಧದ ತಮ್ಮ ಕಚೇರಿಯಲ್ಲಿ ರಾಜ್ಯದಲ್ಲಿ ಸ್ಥಾಪಿಸಲಾಗಿರುವ ಪುಡ್ ಪಾರ್ಕ್ ಗಳ ಪುನಶ್ಚೇತನ ಹಾಗೂ ಸಿರಿಧಾನ್ಯಗಳಿಗೆ ಸಂಬಂಧಿತ ಕಾರ್ಯಾಚರಣೆಯಲ್ಲಿರುವ ಸ್ಟಾರ್ಟ್ ಅಪ್ ಉದ್ಯಮಗಳಿಗೆ ಇಲಾಖೆ ಸಹಭಾಗಿತ್ವದಲ್ಲಿ ರೈತರೊಂದಿಗೆ ಸಂಪರ್ಕಿಸುವ ಕುರಿತು ಸಭೆ ನಡೆಸಿ ಅವರು ಮಾತನಾಡಿದರು.
ಸಭೆಯಲ್ಲಿ ಕೃಷಿ ನವೋದ್ಯಮಗಳ ಸ್ಥಿತಿಗತಿ, ಅವುಗಳು ಎದುರಿಸುತ್ತಿರುವ ಸವಾಲುಗಳು,
ಸಿರಿಧಾನ್ಯ ಆಧಾರಿತ ಉದ್ಯಮಗಳನ್ನು ಬಲ ಪಡಿಸಲು ಅಗತ್ಯ ಇರುವ ಸರ್ಕಾರದ ನೆರವಿನ ಕುರಿತು ಕೃಷಿ ಸಚಿವರು ಸ್ಟಾರ್ಟಪ್ ಉದ್ಯಮಿಗಳ ಅಭಿಪ್ರಾಯ ಆಲಿಸಿದರು.
ಸಿರಿ ಧಾನ್ಯ ಬೇಡಿಕೆ ಹೆಚ್ಚಿದ್ದರೂ ಪೂರೈಕೆ ಕೊರತೆ ಇದೆ. ಹಾಗಾಗಿ ಪ್ರೋತ್ಸಾಹ ಧನ ಯೋಜನೆ ಮುಂದುವರೆಸುವ ಜೊತೆಗೆ ಉತ್ಪಾದನೆಯನ್ನು 30 ಸಾವಿರದಿಂದ 50 ಸಾವಿರ ಹೆಕ್ಟೇರ್ ಗೆ ಏರಿಕೆ ಮಾಡಲು ಸೂಕ್ತ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಸೂಚಿಸಿದರು.
ರೈತರೊಂದಿಗೆ ಉದ್ದಿಮೆದಾರರ ನೇರ ಖರೀದಿ ವ್ಯವಸ್ಥೆ ಮಾಡಿಸುವ ಬಗ್ಗೆ ಚಿಂತನೆ ನಡೆಸಿ.
ರಾಜ್ಯಾದ್ಯಂತ ಇರುವ ಎಫ್.ಪಿ.ಓ ಗಳ ಜೊತೆ ಉದ್ದಿಮೆದರರ ಸಂಪರ್ಕ ಕಲ್ಪಿಸಿ ಎಂದು ಅವರು ಹೇಳಿದರು.
ಪ್ರತಿ ಜಿಲ್ಲೆಯಲ್ಲೂ 2 ದಿನಗಳ ಸಿರಿಧಾನ್ಯ ಮೇಳ ಏರ್ಪಡಿಸುವ ಜೊತೆಗೆ ವಿದೇಶದಲ್ಲಿ ನಡೆಯುವ ಆಹಾರ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಗಳಲ್ಲಿ ರಾಜ್ಯದಿಂದ ಮಳಿಗೆ ಹಾಕಲು ಸಹ ನೆರವು ಒದಗಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು .
ಪ್ರಸಕ್ತ ಮಿಲೆಟ್ ಪೌಡರ್ ಗಳಿಗೆ ಜಿ.ಎಸ್.ಟಿ ಯನ್ನು ಶೇ 18 ರಿಂದ 5 ಕ್ಕೆ ಇಳಿಕೆ ಮಾಡಿರುವಂತೆ ಇದನ್ನು ಇತರ ಮೌಲ್ಯವರ್ಧಿತ ಕೃಷಿ ಆಹಾರ ಉತ್ಪನ್ನಗಳಿಗೂ ವಿಸ್ತರಿಸಬೇಕು ಎಂದು ನವೋದ್ಯಮಿಗಳು ಮನವಿ ಮಾಡಿದ್ದು ಈ ಬಗ್ಗೆ ಕೇಂದ್ರ ಸರ್ಕಾರರಕ್ಕೆ ಪೂರಕ ಪ್ರಸ್ತಾವನೆ ಕಳಿಸಲಾಗುವುದು ಎಂದು ಸಚಿವರು ತಿಳಿಸಿದರು.
ಮಿಲೆಟ್ ಆಹಾರ ಉತ್ಪಾದಕರಿಗೆ ತಂತ್ರಜ್ಞಾನ ವಿಸ್ತರಣೆ ಜೊತೆಗೆ ಧೀರ್ಘಾವದಿಗೆ ಆಹಾರ ಪದಾರ್ಥ ಸಂಸ್ಕರಣೆ ಗೆ ಸಿ.ಫ್.ಟಿ.ಆರ್.ಐ ಮೂಲಕ ನೆರವು ಒದಗಿಸಲು ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದೂ ಅವರು ಭರವಸೆ ನೀಡಿದರು.
ಕೃಷಿ ಇಲಾಖೆ ಮೂಲಕ ಶೀಘ್ರವೇ ಕೃಷಿ ನವೋದ್ಯಮಗಳು ಹಾಗೂ ಉತ್ಪಾದಕರು, ಪೂರೈಕೆದಾರರ ಸಂಪರ್ಕ ಬೆಸೆಯುವ ಕೆಲಸ ಮಾಡಲಾಗುವುದು ಜೊತೆಗೆ ಮಾರುಕಟ್ಟೆ ಉತ್ತೇಜನಕ್ಕೆ ಸರ್ಕಾರದ ನೆರವು ಸದಾ ಸಿಗಲಿದೆ. ಇದರಿಂದ ರೈತರಿಗೂ ಅನುಕೂಲವಾಗಲಿದೆ ಎಂದು ಕೃಷಿ ಸಚಿವರು ತಿಳಿಸಿದರು
ಇದೇ ವೇಳೆ ವಿವಿಧ ಆಧಾರಿತ ಸಿರಿಧಾನ್ಯ ಆಹಾರ ಪದಾರ್ಥಗಳ ಉತ್ಪಾದಕರು ಉದ್ಯಮದ ಯಶಸ್ಸು, ವ್ಯಾಪ್ತಿ ಬಗ್ಗೆ ವಿವರಿಸಿ, ನವೋದ್ಯಮಕ್ಕೆ ಸಹಕಾರ ನೀಡಿದ ಕೃಷಿ ಸಚಿವರು ಸರ್ಕಾರ ನೆರವಿಗೆ ಧನ್ಯವಾದ ಸಮರ್ಪಿಸಿದರು.
ರಾಜ್ಯ ಸರ್ಕಾರದ ಅಭಿವೃದ್ಧಿ ಆಯುಕ್ತರು ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ , ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಅನ್ಬುಕುಮಾರ್, ಕೃಷಿ ಆಹಾರ ಸಂಸ್ಕರಣೆ ಮತ್ತು ಕಟಾವು ತಂತ್ರಜ್ಞಾನದ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರು ಸಹ ಅಮೂಲ್ಯ ಸಲಹೆಗಳನ್ನು ನೀಡಿದರು. ಕೃಷಿ ಆಯುಕ್ತರಾದ ವೈ.ಎಸ್ .ಪಾಟೀಲ್, ನೀರ್ದೇಶಕರಾದ ಡಾ. ಪುತ್ರ, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕರಾದ ಬಂಥನಾಳ್ ಮತ್ತಿತರ ಹಾಜರಿದ್ದರು.
ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…
ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…
ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…
ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…