ಶ್ರೀರಂಗಪಟ್ಟಣ : ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮ ರಾಜ್ಯ, ದೇಶದಲ್ಲಿ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ. ಅಮೆರಿಕದ ಫೀನಿಕ್ಸ್ ನೆಲೆಸಿರುವ ಬೆಂಗಳೂರು ಮೂಲದ ಜ್ಯೋತಿ ಮತ್ತು ವಿಕಾಸ್ ದಂಪತಿಗಳು ಕಾವೇರಿ ಆರತಿ ಕಾರ್ಯಕ್ರಮವನ್ನು ಮೆಚ್ಚಿ ಕೊಂಡಾಡಿದ್ದಾರೆ. ಭಾರತದ ಪವಿತ್ರ ನದಿಗಳಲ್ಲಿ ಒಂದಾದ ಕಾವೇರಿ ನದಿಗೆ ಕಾವೇರಿ ಆರತಿಯಂತಹ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಐದು ಲಕ್ಷ ರೂ.ಗಳನ್ನು ಸಮರ್ಪಣೆ ಮಾಡಿದ್ದಾರೆ.
ತಾನು ಬೆಂಗಳೂರಿನವರಾಗಿದ್ದು, ಕಾವೇರಿ ನೀರನ್ನು ಕುಡಿದು ಬಾಲ್ಯ ಜೀವನ ಕಳೆದು, ಇಂಜಿನಿಯರಿಂಗ್ ಪದವಿ ಪೂರೈಸಿ ಅಮೆರಿಕದಲ್ಲಿ ನೆಲೆಸಿದ್ದೇವೆ. ಸೆಪ್ಟೆಂಬರ್ 26ರಿಂದ ಕೆಆರ್ ಎಸ್ ನ ಬೃಂದಾವನದಲ್ಲಿ ಆರಂಭವಾಗಿರುವ ಐತಿಹಾಸಿಕ “ಕಾವೇರಿ ಆರತಿ” ಕಾರ್ಯಕ್ರಮವನ್ನು ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ವೀಕ್ಷಿಸಿ ಭಾವುಕರಾಗಿದ್ದೇವೆ.
ಇದನ್ನೂ ಓದಿ:-ಮನ್ ಕಿ ಬಾತ್‌ನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪಗೆ ಪ್ರಧಾನಿ ಮೋದಿ ನಮನ
ಅಮೆರಿಕಾದಲ್ಲಿ ನೆಲೆಸಿದ್ದರೂ ನಾವು ಕುಡಿದು ಬೆಳೆದಿರುವುದು ಕಾವೇರಿ ನೀರು. ಕಾವೇರಿ ತಾಯಿ ಕೋಟ್ಯಂತರ ಜನರ ದಾಹ ನೀಗಿಸಿದ್ದು ರೈತರ ಬದುಕಿಗೆ ಆಸರೆಯಾಗಿದ್ದಾಳೆ. ಜೀವನದ ಅವಿಭಾಜ್ಯ ಅಂಗವಾಗಿದ್ದಾಳೆ. ಕನ್ನಡ ನಾಡಿನ ಜನತೆ ಕಾವೇರಿಯನ್ನು ಮರೆಯಲು ಸಾಧ್ಯವಿಲ್ಲ. ಇಂತಹ ಜೀವನದಿಗೆ ವಂದಿಸಿ, ನಮಿಸುವ ಕಾರ್ಯಕ್ಕೆ ಮುನ್ನುಡಿ ಬರೆದಿರುವ ಕರ್ನಾಟಕ ಸರ್ಕಾರದ ಈ ಕಾರ್ಯಕ್ಕೆ ಎಲ್ಲಾ ಅನಿವಾಸಿ ಕನ್ನಡಿಗರ ಪರವಾಗಿ ಅಭಿನಂದನೆಗಳು. “ಕಾವೇರಿ ಆರತಿ”ಯ ಪೂಜಾ ವಿಧಾನ ಹಾಗೂ ಕಾರ್ಯಕ್ರಮದ ಬಗ್ಗೆ ಸಂತಸಗೊಂಡಿದ್ದೇವೆ. ಕರ್ನಾಟಕ ಸರ್ಕಾರದ ಈ ಕಾರ್ಯ ಪ್ರಶಂಸನೀಯ. ರಾಜ್ಯದ ಇತಿಹಾಸದಲ್ಲಿ ಈ ಕಾರ್ಯ ನಿರಂತರವಾಗಿ ನಡೆಯಬೇಕು. ಕಾವೇರಿ ಮಾತೆಗೆ ವಂದಿಸಿ, ಪೂಜಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಮತ್ತು ಜವಾಬ್ದಾರಿ. ದೇವರು ಎಂದರೆ ಪ್ರಕೃತಿ. ಆ ಪ್ರಕೃತಿ ರೂಪವೇ ಕಾವೇರಿ. ಕಾವೇರಿಯನ್ನು ಪೂಜಿಸುವುದರಿಂದ ಮಾನವ ಕುಲ ಮಾತ್ರವಲ್ಲದೆ ಸಕಲ ಜೀವಸಂಕುಲಕ್ಕೂ ಸನ್ಮಂಗಳ ಉಂಟಾಗಲಿದೆ. ಆದ್ದರಿಂದ ಕಾವೇರಿ ಆರತಿಯನ್ನು ಕೇವಲ ದಸರಾಗೆ ಮಾತ್ರ ಸೀಮಿತಗೊಳಿಸದೆ ವರ್ಷ ಪೂರ್ತಿ ಆಚರಣೆ ಮಾಡಬೇಕು. ಕಾವೇರಿ ಆರತಿ ಕಾರ್ಯಕ್ರಮ ಶಾಸ್ತ್ರೋಕ್ತವಾಗಿದೆ.
ಇದೊಂದು ಪುಣ್ಯದ ಕಾರ್ಯ. ಮುಂದಿನ ದಿನಗಳಲ್ಲಿ ಕರ್ನಾಟಕಕ್ಕೆ ಬಂದಾಗ ಕಾವೇರಿ ತಾಯಿಗೆ ಪೂಜೆ ಸಲ್ಲಿಸುತ್ತೇನೆ ಅನಿವಾಸಿ ಭಾರತೀಯೆ ಜ್ಯೋತಿ ವಿಕಾಸ್ ಹೇಳಿದ್ದಾರೆ. ಜ್ಯೋತಿ ವಿಕಾಸ ಅವರು 5 ಲಕ್ಷ ರೂ ಹಣವನ್ನು ಕಾವೇರಿ ಆರತಿ ಹಾಗೂ ಅಭಿವೃದ್ಧಿಗಾಗಿ ಬಳಸಿಕೊಳ್ಳಲು 5 ಲಕ್ಷ ರೂ ಕಳುಹಿಸಿಕೊಟ್ಟಿರುತ್ತಾರೆ. ಈ ಕುರಿತಂತೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂಎಸ್‌ಸಿ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.
ಮಹಾದೇಶ್ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…
ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…
ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…