ಮಂಡ್ಯ : ಹೆಚ್ಚಿನ ಸಂಖ್ಯೆಯ ಮಹಿಳೆಯರು ಬಸ್ ಏರುವ ವೇಳೆ ನೂಕುನುಗ್ಗಲು ಉಂಟಾಗಿ ಬಸ್ ಡೋರ್ ಮುರಿದ ಘಟನೆ ಮಳವಳ್ಳಿಯ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬಸ್ ನಿಲ್ದಾಣಕ್ಕೆ ಬರುತ್ತಿದ್ದಂತೆ ಸೀಟು ಹಿಡಿಯುಲು ಜನರು ಏಕಾಏಕಿ ನುಗ್ಗಿದ್ದಾರೆ. ಇದರಿಂದ ಡೋರ್ ಮುರಿದು ಹೋಗಿದೆ. ನಂತರ ಬಸ್‍ನಿಂದ ಪ್ರಯಾಣಿಕರನ್ನು ಸಿಬ್ಬಂದಿ ಕೆಳಗಿಳಿಸಿದ್ದಾರೆ. ಕಿತ್ತು ಹೋದ ಡೋರ್‌ನ್ನು ಟಿಸಿಗೆ ಹಸ್ತಾಂತರಿಸಿದ್ದಾರೆ.
ರಾಜ್ಯದಲ್ಲಿ ಶಕ್ತಿ ಯೋಜನೆ ಘೋಷಣೆ ಆದಾಗಿನಿಂದ ಎಲ್ಲೆಡೆ ಕೆಎಸ್‍ಆರ್‌ಟಿಸಿ ಬಸ್‍ಗಳು ತುಂಬಿ ತುಳುಕುತ್ತಿವೆ. ಬಹುತೇಕ ಧಾರ್ಮಿಕ ಕ್ಷೇತ್ರಗಳಿಗೆ ಮಹಿಳೆಯರು ಭೇಟಿ ನೀಡುತ್ತಿದ್ದಾರೆ. ಇದರಿಂದ ಎಷ್ಟೋ ಪ್ರಯಾಣಿಕರು ಬಸ್‍ನಲ್ಲಿ ಜಾಗ ಇಲ್ಲದೇ ಪರದಾಡಿದ್ದಾರೆ.
ಶನಿವಾರ ಕೊಳ್ಳೆಗಾಲದಲ್ಲಿ ಕೆಎಸ್‍ಆರ್‌ಟಿಸಿ ಬಸ್ ಒಂದರ ಬಾಗಿಲು ಕಿತ್ತು ಬಂದಿತ್ತು. ಇದೀಗ ಅದೇ ರೀತಿಯ ಘಟನೆ ಮಳವಳ್ಳಿ ಪಟ್ಟಣದಲ್ಲಿ ಮರುಕಳಿಸಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…