Darshan Puttannaiah
ಮಂಡ್ಯ : ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಆ್ಯಪ್ ಅಭಿವೃದ್ಧಿ ಪಡಿಸಲಾಗಿದೆ, ನಿಮ್ಮ ಸಮಸ್ಯೆಗಳನ್ನು ನಮೂದಿಸಿದರೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ನಿಮ್ಮ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.
ಇಂದು (ಜು.30) ದುದ್ದ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ “ಸರ್ಕಾರಿ ಕಚೇರಿಗಳಿಗೆ ನೀವು ಬರಬೇಡಿ ಕಚೇರಿಯೇ ನಿಮ್ಮ ಮನೆ ಬಾಗಿಲಿಗೆ ಬರಲಿದೆ” ಎನ್ನುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದುದ್ದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 1310 ಕ್ಕೂ ಹೆಚ್ಚು ಮನೆಗಳಿವೆ, ಈಗಾಗಲೇ ಅಧಿಕಾರಿಗಳು ದುದ್ದ ಪಂಚಾಯತಿಯ ಶೇ 90 ರಷ್ಟು ಮನೆಗಳಿಗೆ ತೆರಳಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಆಪ್ ನಲ್ಲಿ ನಮೂದಿಸಿದ್ದಾರೆ ಎಂದು ತಿಳಿಸಿದರು.
ಸಮಸ್ಯೆ ಹೊಂದಿರುವ ಸಾರ್ವಜನಿಕರಲ್ಲಿ ಶೇ 80 ರಷ್ಟು ಜನರು ಅರ್ಜಿ ಸಲ್ಲಿಸಲು ಹಿಂದೇಟು ಹಾಕುತ್ತಾರೆ, ಶೇ 20 ರಷ್ಟು ಜನರು ಮಾತ್ರ ಶಾಸಕರ ಕಚೇರಿ ಹಾಗೂ ಸರ್ಕಾರಿ ಕಚೇರಿಗಳಿಗೆ ತೆರಳಿ ಅರ್ಜಿ ಸಲ್ಲಿಸುತ್ತಾರೆ, ಈ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಿಗೆ ನೀವು ಬರಬೇಡಿ ಕಚೇರಿಯೇ ನಿಮ್ಮ ಮನೆ ಬಾಗಿಲಿಗೆ ಬರಲಿದೆ” ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಅಧಿಕಾರಿಗಳಲ್ಲಿ ಅರ್ಜಿ ಕೊಟ್ಟರೆ ಮಾತ್ರ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂಬ ಮನೋಭಾವನೆ ಇದೆ, ಇದನ್ನು ಹೋಗಲಾಡಿಸಲು ಹೊಸ ಆಪ್ ಒಂದನ್ನು ಅಭಿವೃದ್ಧಿ ಪಡಿಸಿದ್ದೇವೆ, ಅಪ್ ನಲ್ಲಿ ಸಮಸ್ಯೆಗಳನ್ನು ತಿಳಿಸಿದರೆ ಸಂಭಂದ ಪಟ್ಟ ಅಧಿಕಾರಿಗಳು ಅದರ ನಿವಾರಣೆಗೆ ಕ್ರಮ ಕೈಗೊಳ್ಳಲಿದ್ದಾರೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರೆ ಆ್ಯಪ್ ಬಳಸಿ ತಮ್ಮ ಸಮಸ್ಯೆಗಳನ್ನು ನಮೂದಿಸಬಹುದಾಗಿದೆ ಎಂದರು.
ಅಧಿಕಾರಿಗಳು ರೈತರ ಬಳಿ ಹೋಗಿ ಬೆಳೆ ಪದ್ಧತಿ ಬದಲಾವಣೆಯಿಂದ ಉಂಟಾಗುವ ಆದಾಯ ಹೆಚ್ಚಳ ಕುರಿತು ಮಾಹಿತಿ ನೀಡಬೇಕು, ಹೆಚ್ಚಾಗಿ ಗದ್ದೆಗಳಿಗೆ ಹೋಗಲು ದಾರಿ ಇಲ್ಲವೆಂದು ರೈತರು ತಿಳಿಸಿದ್ದಾರೆ ನಕ್ಷೆಯಲ್ಲಿ ದಾರಿ ಇದ್ದು ಒತ್ತುವರಿ ಮಾಡಿದ್ದಾರೆ ತೆರವುಗೊಳಿಸಲಾಗುವುದು ಎಂದು ತಿಳಿಸಿದರು.
ಸ್ವಾತಂತ್ರ್ಯ ಬಂದು 76 ವರ್ಷ ಕಳೆದರೂ ನಮ್ಮ ಗ್ರಾಮಗಳಲ್ಲಿ ಸ್ಮಶಾನ ಇಲ್ಲವೆಂದು ಹೇಳುತ್ತಾರೆ, ನಿಮ್ಮ ಗ್ರಾಮಗಳಲ್ಲಿ ಸ್ಮಶಾನ ಇಲ್ಲವಾದರೆ ಆರ್.ಟಿ.ಸಿ ಯಲ್ಲಿರುವ ಸರ್ಕಾರಿ ಜಾಗಗಳನ್ನು ಪರೀಶೀಲನೆ ನಡೆಸಲಾಗುವುದು, ಒಂದು ವೇಳೆ ಯಾರಾದರೂ ಸ್ಮಶಾನ ಒತ್ತುವರಿ ಮಾಡಿದ್ದಾರೆ ಒತ್ತುವರಿಯನ್ನು ತೆರೆವುಗೊಳಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಮಂಡ್ಯ ತಹಶೀಲ್ದಾರ್ ವಿಶ್ವನಾಥ್ ಮಾತನಾಡಿ ಶಾಸಕರು ಕಳೆದ 6 ಗ್ರಾಮ ಪಂಚಾಯಿತಿಯಲ್ಲಿ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದ್ದಾರೆ, ಇದು 7 ಗ್ರಾಮ ಪಂಚಾಯಿತಿ. ಮೊದಲೆಲ್ಲ ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ವಿ.ಐ. ಆರ್.ಐ. ಪಿಡಿಒ ಗಳ ಕಚೇರಿಗಳನ್ನು ತಿರುಗಬೇಕಿತ್ತು ಆದರೆ ಈಗ ಆಧಿಕಾರಿಗಳೆ ನಿಮ್ಮ ಮನೆಗಳಿಗೆ ಬಂದು ನಿಮ್ಮ ಸಮಸ್ಯೆ ಆಲಿಸಿ ಪರಿಹಾರ ನೀಡುವ ಕಾರ್ಯಕ್ರಮವಿದು ಸಾರ್ವಜನಿಕರು ಇದನ್ನು ಸದ್ದುಪಯೋಗಪಡಿಸಿಕೊಳ್ಳಬೇಕು ಎಂದರು.
ಕಂದಾಯ ಇಲಾಖೆ ಸಚಿವರಾದ ಕೃಷ್ಣ ಭೈರೇಗೌಡ ರವರು ಆನ್ ಲೈನ್ ಮೂಲಕ ಪೌತಿ ಖಾತೆ ಮಾಡಿಸಿಕೊಳ್ಳಲು ಅನುವು ಮಾಡಿದ್ದಾರೆ, ಆನ್ಲೈನ್ ಪೌತಿ ಖಾತೆ ಪಡೆಯಲು ಮುಖ್ಯವಾಗಿ ವಂಶವೃಕ್ಷ, ಮರಣ ಪ್ರಮಾಣ ಪತ್ರ ನಿಮ್ಮ ಬಳಿ ಇದ್ದರೆ ಕೇವಲ 15 ದಿನಗಳಲ್ಲಿ ನಿಮಗೆ ಪೌತಿ ಖಾತೆ ದೊರೆಯುತ್ತದೆ. ನಿಮ್ಮ ಜಾಮೀನುಗಳನ್ನು ದುರಸ್ತಿ ಮಾಡುವುದು ಈಗ ಆನ್ ಲೈನ್ ಹಾಗಿದೆ ಇದನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ನಂತರ ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಲೋಕೇಶ್ ಮೂರ್ತಿ ಮಾತನಾಡಿ ಗ್ರಾಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಎರಡು ವಾರಗಳು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ಜನರು ತಮ್ಮ ಊರಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕೆ ಶಾಸಕರು ಹಾಗೂ ಅಧಿಕಾರಿಗಳ ಕಚೇರಿಯನ್ನು ಅಲೆದಾಟವನ್ನು ತಪ್ಪಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ, ನಮ್ಮೇಲ್ಲ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಮರ್ಪಕವಾಗಿ ಕೆಲಸಗಳನ್ನು ಮಾಡುತ್ತೇವೆ ಎಂದರು.
ನಂತರ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ರವರು ಸಾರ್ವಜನಿಕರ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸಮಸ್ಯೆಗಳನ್ನು ಪರಿಹರಿಸಲು ಸೂಚಿಸಿದರು.
ಕಾರ್ಯಕ್ರಮದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಚಲುವಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಸೌಭಾಗ್ಯಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಚಂದ್ರ, ಶಿಶು ಯೋಜನಾ ಅಭಿವೃದ್ಧಿ ಅಧಿಕಾರಿ ಕುಮಾರಸ್ವಾಮಿ, ಮಂಡ್ಯ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಹೆಚ್.ಎಂ.ಉದಯ್ ಕುಮಾರ್, ಮೀನುಗಾರಿಕೆ ಸಹಾಯಕ ನಿರ್ದೇಶಕ ಲೋಕೇಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಲಿಂಗೆಗೌಡ ಸೇರಿ ಮತ್ತಿತ್ತರು ಭಾಗಿಯಾಗಿದ್ದರು.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…