ಮಂಡ್ಯ: ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

ಮಂಡ್ಯ: ಗ್ರಾಮ ಒನ್ ಕೇಂದ್ರಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಆನ್ನೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 15 ಕೊನೆದಿನವಾಗಿದೆ. ಈ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿ‌ ಯಶಸ್ವಿಯಾಗಿದ್ದು, ಸರ್ಕಾರವು ಈಗ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ “ಗ್ರಾಮ ಒನ್” ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಯೋಜನೆಯನ್ನು ವಿಸ್ತರಿಸಿದೆ.

ಗ್ರಾಮ ಒನ್’ ಇದು ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಸೇವಾ ಸಿಂಧು ಯೋಜನೆ ಅಡಿಯಲ್ಲಿ ರೂಪಿಸಲಾಗಿದೆ. ಸರ್ಕಾರದ ಸೇವೆಗಳನ್ನು ಮನೆಬಾಗಿಲಿಗೆ ತಲುಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಈ ಯೋಜನೆ ಅಡಿಯಲ್ಲಿ ನಾಗರೀಕ ಸೇವೆಗಳನ್ನು ಪಡೆಯಬಹುದು.

ಅರ್ಜಿಯನ್ನು ಸಲ್ಲಿಸುವವರು https://kal-mys.gramaone.karnataka.gov.in/index.php/applicant-registration-initial-step ವೆಬ್ ಸೈಟ್ ಮೂಲಕ ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.