ಮಂಡ್ಯ

ಮಂಡ್ಯ: ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

ಮಂಡ್ಯ: ಗ್ರಾಮ ಒನ್ ಕೇಂದ್ರಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಆನ್ನೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 15 ಕೊನೆದಿನವಾಗಿದೆ. ಈ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿ‌ ಯಶಸ್ವಿಯಾಗಿದ್ದು, ಸರ್ಕಾರವು ಈಗ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ “ಗ್ರಾಮ ಒನ್” ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಯೋಜನೆಯನ್ನು ವಿಸ್ತರಿಸಿದೆ.

ಗ್ರಾಮ ಒನ್’ ಇದು ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಸೇವಾ ಸಿಂಧು ಯೋಜನೆ ಅಡಿಯಲ್ಲಿ ರೂಪಿಸಲಾಗಿದೆ. ಸರ್ಕಾರದ ಸೇವೆಗಳನ್ನು ಮನೆಬಾಗಿಲಿಗೆ ತಲುಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಈ ಯೋಜನೆ ಅಡಿಯಲ್ಲಿ ನಾಗರೀಕ ಸೇವೆಗಳನ್ನು ಪಡೆಯಬಹುದು.

ಅರ್ಜಿಯನ್ನು ಸಲ್ಲಿಸುವವರು https://kal-mys.gramaone.karnataka.gov.in/index.php/applicant-registration-initial-step ವೆಬ್ ಸೈಟ್ ಮೂಲಕ ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಳೆ ಭಾರತ ಬಂದ್‌ : ಶಾಲಾ, ಕಾಲೇಜು ಬಂದ್? ಏನಿರುತ್ತೇ, ಏನಿರಲ್ಲ?

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ನಾಳೆ(ಫೆ.12) ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ.…

1 min ago

ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ ; ವಂದೇ ಮಾತರಂಗೂ ಶಿಷ್ಟಾಚಾರ ಗೌರವ!

ಹೊಸದಿಲ್ಲಿ : ‘ರಾಷ್ಟ್ರಗೀತೆ’ಗೂ ಮುನ್ನ ‘ವಂದೇ ಮಾತರಂ’ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು, ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆಗೊಳಿಸಿದೆ.…

33 mins ago

ವಿದ್ಯಾರ್ಥಿಗಳು ಹೊಸ ಹೊಸ ವಿಷಯಗಳ ಕಡೆ ಗಮನಹರಿಸಿ : ಕುಲಪತಿ ಲೋಕನಾಥ್‌ ಸಲಹೆ

ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು…

44 mins ago

ಸೈಬರ್‌ ವಂಚನೆ ಕೇವಲ ಆರ್ಥಿಕ ಅಪರಾಧವಲ್ಲ. ರಾಷ್ಟ್ರೀಯ ಭದ್ರತೆಗೆ ಸವಾಲು: ಅಮಿತ್‌ ಶಾ

ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್‌ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್‌ ಭದ್ರತೆಯು ಈಗ ಕೇವಲ…

2 hours ago

ಬೆಂಗಳೂರಿನಲ್ಲಿ ಭೀಕರ ಅಪಘಾತ: ಶಾಲಾ ಬಸ್‌ ಹರಿದು ಇಬ್ಬರು ಪುಟ್ಟ ಮಕ್ಕಳ ದಾರುಣ ಸಾವು

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…

2 hours ago

ಮಲೆಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರಿಂದ ಪಾದಯಾತ್ರೆ: ಪೊಲೀಸರಿಂದ ಬ್ಯಾರಿಕೇಡ್‌ ಹಾಕಿ ಜಾಗೃತಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ…

2 hours ago