ಮಂಡ್ಯ: ಗ್ರಾಮ ಒನ್ ಕೇಂದ್ರಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಆನ್ನೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 15 ಕೊನೆದಿನವಾಗಿದೆ. ಈ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿ ಯಶಸ್ವಿಯಾಗಿದ್ದು, ಸರ್ಕಾರವು ಈಗ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ “ಗ್ರಾಮ ಒನ್” ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಯೋಜನೆಯನ್ನು ವಿಸ್ತರಿಸಿದೆ.
ಗ್ರಾಮ ಒನ್’ ಇದು ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಸೇವಾ ಸಿಂಧು ಯೋಜನೆ ಅಡಿಯಲ್ಲಿ ರೂಪಿಸಲಾಗಿದೆ. ಸರ್ಕಾರದ ಸೇವೆಗಳನ್ನು ಮನೆಬಾಗಿಲಿಗೆ ತಲುಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಈ ಯೋಜನೆ ಅಡಿಯಲ್ಲಿ ನಾಗರೀಕ ಸೇವೆಗಳನ್ನು ಪಡೆಯಬಹುದು.
ಅರ್ಜಿಯನ್ನು ಸಲ್ಲಿಸುವವರು https://kal-mys.gramaone.karnataka.gov.in/index.php/applicant-registration-initial-step ವೆಬ್ ಸೈಟ್ ಮೂಲಕ ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…