ನವದೆಹಲಿ/ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿರುವ ಕೇಂದ್ರೀಯ ವಿದ್ಯಾಲಯಕ್ಕೆ ಕಾಯಂ ಶಿಕ್ಷಕರನ್ನು ನೇಮಕ ಮಾಡುವ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಕೇಂದ್ರಿಯ ವಿದ್ಯಾಲಯದ ಕಾಯಂ ಶಿಕ್ಷಕರ ನೇಮಕದ ಬಗ್ಗೆ ಮಂಡ್ಯ ಸಂಸದರು ಹಾಗೂ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು, ಬಹಳ ದಿನಗಳಿಂದ ಕಾಯಂ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆ ಆಗಿತ್ತು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಮನವಿ ಮಾಡಿದ್ದರು. ಅವರ ಮನವಿಗೆ ಮಾನ್ಯತೆ ಕೊಟ್ಟ ಕೇಂದ್ರ ಶಿಕ್ಷಣ ಸಚಿವರು, ಆದಷ್ಟು ಶೀಘ್ರವೇ ಕಾಯಂ ಶಿಕ್ಷಕರನ್ನು ನೇಮಕ ಮಾಡಲಾಗುವುದು ಅಲ್ಲದೆ, ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ಕಾಲಮಿತಿಯೊಳಗೆ ನಿರ್ಮಾಣ ಕಾಮಗಾರಿಗಳನ್ನು ಪೂರೈಸಿ ಕೊಡಲಾಗುವುದು ಎಂದು ಅವರು ತಿಳಿಸಿದ್ದು, ಈ ಬಗ್ಗೆ ಶಿಕ್ಷಣ ಸಚಿವರು ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.





