ಮಂಡ್ಯ

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 590 ಸಿಬ್ಬಂದಿಗಳಿಗೆ ಅನುಮೋದನೆ ನೀಡಲಾಗಿದ್ದು, ಸದರಿ ಸಿಬ್ಬಂದಿಗಳಿಗೆ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾನ್ಯ ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಆದೇಶ ಪ್ರತಿ ವಿತರಿಸಿದರು.

ಸರ್ಕಾರದ ನಿರ್ದೇಶನದಂತೆ ಗ್ರಾಮ ಪಂಚಾಯತ್‌ನ ಅರ್ಹ ಸಿಬ್ಬಂದಿಗಳಿಗೆ ಅನುಮೋದನೆ ನೀಡುವಂತೆ ಸಿಇಓ ಅವರಿಗೆ ಸೂಚಿಸಲಾಗಿತ್ತು. ಸಿಇಓ ಮತ್ತು ಅವರ ತಂಡ ಅತ್ಯಂತ ಪಾರದರ್ಶಕವಾಗಿ ಅನುಮೋದನೆ ಪ್ರಕ್ರಿಯೆ ಪೂರ್ಣಗೊಳಿಸಿದೆ ಎಂದು ಮಾನ್ಯ ಸಚಿವರು ತಿಳಿಸಿದರು.

ಸರ್ಕಾರದ ಆದೇಶ ಸಂಖ್ಯೆ:ಕೆ.ಪಿ.ಆರ್.ಸಿ/ಜಿಪಿಎ/450/2023, ದಿನಾಂಕ:18-11-2023ರಂತೆ ನೌಕರರ ಅನುಮೋದನೆ ಪ್ರಕ್ರಿಯೆ ಕೈಗೊಳ್ಳಲು ಹಾಗೂ ಅನುಮೋದನೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಒಟ್ಟು ನಾಲ್ಕು ಹಂತಗಳಲ್ಲಿ ನೌಕರರ ದಾಖಲಾತಿಗಳ ಪರಿಶೀಲನಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು, ಈ ಪ್ರಕ್ರಿಯೆ ಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಶಾಸಕರು ಮತ್ತು ಆಡಳಿತ ವರ್ಗಕ್ಕೆ ಸಿಇಓ ಅವರು ಅಭಿನಂದನೆ ಸಲ್ಲಿಸಿದರು.

ನಂತರದಲ್ಲಿ ತಾಲ್ಲೂಕುವಾರು ಪ್ರಸ್ತಾವನೆಗಳನ್ನು ಪ್ರತ್ಯೇಕ ಪರಿಶೀಲನಾ ಸಮಿತಿಯಿಂದ ಪರಿಶೀಲಿಸಿ, ನಡವಳಿಯಲ್ಲಿ ದಾಖಲಿಸಿ ಅಂತಿಮವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡದಿಂದ ಮರುಪರಿಶೀಲನೆಗೆ ಒಳಪಡಿಸಿ ಅರ್ಹ ನೌಕರರ ಅನುಮೋದನೆಯ ತಾತ್ಕಾಲಿಕ ಪಟ್ಟಿಯನ್ನು ಸಿದ್ದಪಡಿಸಿ, ಪಟ್ಟಿಯನ್ನು ಜಿಲ್ಲಾ ಪಂಚಾಯತ್ ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತ್‌ಗಳ ಸೂಚನಾ ಫಲಕದಲ್ಲಿ ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು.

ಆಕ್ಷೇಪಣೆ ಸಲ್ಲಿಕೆ ಅವಧಿ ಪೂರ್ಣಗೊಂಡ ನಂತರ 590 ಸಿಬ್ಬಂದಿಗಳಿಗೆ ಅನುಮೋದನೆ ನೀಡಲಾಗಿದ್ದು, ಆದೇಶದ ಪ್ರತಿಗಳನ್ನು ವಿತರಿಸಲಾಗಿದೆ ಎಂದು ಜಿ.ಪಂ. ಸಿಇಓ ನಂದಿನಿ ಕೆ.ಆರ್.ಅವರು ತಿಳಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

5 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

11 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

12 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

12 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

13 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

19 hours ago