ಮಂಡ್ಯ: ತಮಗೆ ಕೇಂದ್ರದಲ್ಲಿ ಕೃಷಿ ಖಾತೆ ಕೈತಪ್ಪಿದ್ದಕ್ಕೆ ಜೆಡಿಎಸ್ ರಾಜ್ಯಾದ್ಯಕ್ಷ ಎಚ್.ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಭಾನುವಾರ(ಜು.15)ಪಾಂಡವಪುರದಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ ತಮಗೆ ಕೃಷಿ ಖಾತೆ ಸಿಗದೆ ಇರುವ ನೋವು ಹೊರಹಾಕಿ, ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಸಾವಿರಕ್ಕೂ ಹೆಚ್ಚು ರೈತು ಆತ್ಮಹತ್ಯೆಯಾಗಿದೆ. ಇದನ್ನು ಕಂಡು ನನಗೆ ಅತೀವ ದುಖಃ ಉಂಟಾಗಿದೆ ಎಂದು ಹೇಳಿದರು.
ನಿಮ್ಮೆಲ್ಲರ ನಿರೀಕ್ಷೆಯಂತೆ ನಾನು ನನಗೂ ಕೇಂದ್ರದಲ್ಲಿ ಕೃಷಿ ಸಚಿವನಾಗುವ ಭರವಸೆ ಇತ್ತು. ಆದರೆ ಆ ಖಾತೆ ಸಿಗಲಿಲ್ಲ. ದೇವರು ನನಗೆ ಮುಂದೆ ಇನ್ನು ದೊಡ್ಡ ಮಟ್ಟದ ಶಕ್ತಿ ಕೊಡುತ್ತಾನೆ ಎಂಬ ನಂಬಿಕೆ ಇದೆ. ಮಂಡ್ಯದ ನನ್ನ ಗೆಲುವು ಜನತೆಯ ಗೆಲುವು. ಕುಮಾರಣ್ಣ ಗೆದ್ದರೆ ಮಂಡ್ಯಕ್ಕೆ ಮಾತ್ರವಲ್ಲ, ಇಡೀ ರೈತ ಸಮುದಾಯಕ್ಕೆ ಉಪಯೋಗ ಎಂದು ನೀವೇ ಆಯ್ಕೆ ಮಾಡಿದ್ದಿರಿ. ಅಧಿಕಾರಕ್ಕೆ ಬಂದ ನಂತರ ರೈತರ ನೆರವಿಗೆ ಬರ್ತೀನಿ ಎಂದಿದ್ದೆ. ಅದಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಅವರು ಹೇಳಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…