ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಬಲ್ಲೇನಹಳ್ಳಿ ಗ್ರಾಮದ ದೇವರಾಜು ಎಂಬವರಿಗೆ ಸೇರಿದ ಮನೆಯಲ್ಲಿ ಇತ್ತೀಚೆಗೆ ಗ್ಯಾಸ್ ಸಿಲಿಂಡರ್ ಸ್ಛೋಟಗೊಂಡು ಭಾಗಶಃ ಸುಟ್ಟು ಹೋಗಿ ಲಕ್ಷಾಂತರ ರೂ.ಗಳು ನಷ್ಟವಾಗಿತ್ತು.
ಈ ಘಟನೆ ವಿಷಯ ತಿಳಿದ ಮಿತ್ರ ಫೌಂಡೇಷನ್ ಅಧ್ಯಕ್ಷರು ಹಾಗೂ ಸಮಾಜ ಸೇವಕ ವಿಜಯ್ ರಾಮೇಗೌಡ ಅವರು, ಮನೆಗೆ ಭೇಟಿ ನೀಡಿ ಆರ್ಥಿಕ ನೆರವು ನೀಡಿ, ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ವೇಳೆ ಬಲ್ಲೇನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಬಿ.ಸಿ.ರಮೇಶ್ ಮಾತನಾಡಿ, ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗೆ ತಮ್ಮದೇ ರೀತಿಯಲ್ಲಿ ಸಹಾಯ, ಸಹಕಾರ ಮಾಡುತ್ತಿರುವ ಬೂಕನಕೆರೆ ಗ್ರಾಮದ ಮಿತ್ರ ಫೌಂಡೇಷನ್ ಅಧ್ಯಕ್ಷರಾದ ವಿಜಯ್ ರಾಮೇಗೌಡ ಅವರು ಸಮಾಜ ಸೇವೆಯ ಮೂಲಕ ತಾಲ್ಲೂಕಿನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ ಎಂದರು.
ಜಿಪಂ ಮಾಜಿ ಸದಸ್ಯ ಕೋಡಿಮಾರನಹಳ್ಳಿ ಎಲ್.ದೇವರಾಜು, ಬಲ್ಲೇನಹಳ್ಳಿ ಪಿಎಸಿಸಿಎಸ್ ಅಧ್ಯಕ್ಷ ಡಿ.ವಿ.ಕುಮಾರ್, ಗುತ್ತಿಗೆದಾರ ಬಿ.ಎಸ್.ರಾಮು, ಗ್ರಾಪಂ ಮಾಜಿ ಅಧ್ಯಕ್ಷ ನಾಗರಾಜು, ಗ್ರಾಪಂ ಮಾಜಿ ಸದಸ್ಯ ಮಹಾದೇವ್, ಡೇರಿ ಮಾಜಿ ಅಧ್ಯಕ್ಷ ಸ್ವಾಮಿಗೌಡ ಹಾಜರಿದ್ದರು.





