Mysore
21
overcast clouds
Light
Dark

ಕೆಆರ್‌ಎಸ್‌ಗೆ ಮುತ್ತಿಗೆ ಯತ್ನ: ಕನ್ನಡ ಸಂಘಟನೆ ಮುಖಂಡರ ಬಂಧನ

ಶ್ರೀರಂಗಪಟ್ಟಣ : ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕೆಆರ್‌ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಕನ್ನಡಿಗರ ರಕ್ಷಣಾ ವೇಧಿಕೆ, ಕರ್ನಾಟಕ ನವ ನಿರ್ಮಾಣ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಸೇರಿದಂತೆ ಕನ್ನಡ ಸಂಘಟನೆಗಳ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಿಂದ ಆಗಮಿಸಿದ್ದ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಜಲಾಶಯದ ಮುಖ್ಯ ದ್ವಾರದ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಕರ್ನಾಟಕ ರಾಜ್ಯದ ರೈತರಿಗೆ ದ್ರೋಹ ಮಾಡಿದ್ದಾರೆ ಎಂದು ಕಿಡಿಕಾರಿದರು.

ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಪ್ರತಿಭಟಿಸಿ ಬಳಿಕ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಕನ್ನಡ ಸಂಘಟನೆ ಹೋರಾಟಗಾರರನ್ನು ಬಲವಂತವಾಗಿ ಬಂಧಿಸಿದ ಪೊಲೀಸರು ವಾಹನದಲ್ಲಿ ತುಂಬಿಕೊಂಡು ಹೋದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ನೇತೃತ್ವದಲ್ಲಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿತ್ತು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ