ಶ್ರೀರಂಗಪಟ್ಟಣ : ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕೆಆರ್‌ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಕನ್ನಡಿಗರ ರಕ್ಷಣಾ ವೇಧಿಕೆ, ಕರ್ನಾಟಕ ನವ ನಿರ್ಮಾಣ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಸೇರಿದಂತೆ ಕನ್ನಡ ಸಂಘಟನೆಗಳ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಿಂದ ಆಗಮಿಸಿದ್ದ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಜಲಾಶಯದ ಮುಖ್ಯ ದ್ವಾರದ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಕರ್ನಾಟಕ ರಾಜ್ಯದ ರೈತರಿಗೆ ದ್ರೋಹ ಮಾಡಿದ್ದಾರೆ ಎಂದು ಕಿಡಿಕಾರಿದರು.
ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಪ್ರತಿಭಟಿಸಿ ಬಳಿಕ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಕನ್ನಡ ಸಂಘಟನೆ ಹೋರಾಟಗಾರರನ್ನು ಬಲವಂತವಾಗಿ ಬಂಧಿಸಿದ ಪೊಲೀಸರು ವಾಹನದಲ್ಲಿ ತುಂಬಿಕೊಂಡು ಹೋದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ನೇತೃತ್ವದಲ್ಲಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿತ್ತು.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…