ಮಂಡ್ಯ

ಮಂಡ್ಯ| ಕೊತ್ತತ್ತಿ ಗ್ರಾಮದಲ್ಲಿ ರೈತರೊಂದಿಗೆ ಭತ್ತ ನಾಟಿ ಮಾಡಿದ ಬಿ.ವೈ.ವಿಜಯೇಂದ್ರ

ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಗ್ರಾಮದಲ್ಲಿ ಗದ್ದೆಗಿಳಿದು ರೈತರೊಂದಿಗೆ ಭತ್ತದ ನಾಟಿ ಮಾಡಿದರು.

ಯುವಕ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಂಡ್ಯ ಜಿಲ್ಲೆಯ ಕೊತ್ತತ್ತಿ ಗ್ರಾಮದಲ್ಲಿ ಭತ್ತ ನಾಟಿ ಮಾಡಿದರು.

ಮಂಡ್ಯಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಗ್ರಾಮಸ್ಥರು ಅದ್ದೂರಿ ಸ್ವಾಗತ ಕೋರಿ ಮೆರವಣಿಗೆಯೊಂದಿಗೆ ಮಂಡ್ಯದಿಂದ ಕೊತ್ತತ್ತಿಗೆ ಟ್ರ್ಯಾಕ್ಟರ್‌ನಲ್ಲಿ ಕರೆ ತಂದರು.

ಈ ವೇಳೆ ಬಿವೈ ವಿಜಯೇಂದ್ರ ಅವರು ಖುದ್ದು ಟ್ರ್ಯಾಕ್ಟರ್ ಚಾಲನೆ ಮಾಡಿಕೊಂಡು ಮೆರವಣಿಗೆಯಲ್ಲಿ ಗ್ರಾಮಕ್ಕೆ ಆಗಮಿಸಿ ರೈತರನ್ನು ಹುರಿದುಂಬಿಸಿದರು. ಬಳಿಕ ಹಲವಾರು ರೈತರೊಂದಿಗೆ ಗದ್ದೆಗಿಳಿದು ಭತ್ತ ನಾಟಿ ಮಾಡಿದರು.

ಭತ್ತ ನಾಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಅಂದ್ರೆ ಯಡಿಯೂರಪ್ಪ ಅವರಿಗೆ ಜನ್ಮ ಕೊಟ್ಟ ಪುಣ್ಯಭೂಮಿ. ನಾನು ಕೂಡ ಮಂಡ್ಯ ಜಿಲ್ಲೆಯ ಮೊಮ್ಮಗ. ಯಡಿಯೂರಪ್ಪ ರೈತರ ಪರ ಹೋರಾಟ ಮಾಡಿಕೊಂಡು ಬಂದವರು. ಅವರಿಗೆ ಪ್ರೇರಣೆ ಸಿಕ್ಕಿದ್ದೆ ಮಂಡ್ಯ ಮಣ್ಣಿನ ಪ್ರಭಾವದಿಂದಾಗಿ. ಯಡಿಯೂರಪ್ಪ ರೈತರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದವರು. ರೈತರಿಗೆ ಪಂಪ್ ಸೆಟ್ ಕೊಟ್ಟ ಏಕೈಕ ನಾಯಕ ಯಡಿಯೂರಪ್ಪ. ಆದರೆ ಕಾಂಗ್ರೆಸ್ ಸರ್ಕಾರ ಬಂದ ನಂತರ ರೈತರ ಪರ ನಿರ್ಧಾರ ಮಾಡಿಲ್ಲ. ಬದಲಾಗಿ ಕಾವೇರಿ ಕೊಳ್ಳದ ರೈತರಿಗೆ ಅನ್ಯಾಯ ಆಗಿದೆ. ತಮಿಳುನಾಡಿನ ಸ್ಟಾಲಿನ್‌ರನ್ನು ಖುಷಿ ಪಡಿಸಲು ಸರ್ಕಾರ ಮುಂದಾಗಿದೆ ಎಂದು ಕಿಡಿಕಾರಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

21 mins ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

36 mins ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

1 hour ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

7 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

7 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

7 hours ago