Mysore
27
clear sky

Social Media

ಗುರುವಾರ, 22 ಜನವರಿ 2026
Light
Dark

3.80 ಕೋಟಿ ವೆಚ್ಚದಲ್ಲಿ ಬಾಬು ಜಗಜೀವನರಾಮ್‌ ಭವನ: ಎನ್‌. ಚೆಲುವರಾಯಸ್ವಾಮಿ

ಮಂಡ್ಯ: 3.80 ಕೋಟಿ ವೆಚ್ಚದಲ್ಲಿ ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನರಾಮ್‌ ಭವನ ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಅವರು ಹೇಳಿದರು.

ಇಂದು ನಗರದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಡಾ. ಬಾಬು ಜಗಜೀವನ ರಾಮ್‌ 118ನೇ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಾಬು ಜಗಜೀವನ ರಾಮ್‌ ಸುದೀರ್ಘ 30 ವರ್ಷಗಳ ಕಾಲ ಕೇಂದ್ರ ಮಂತ್ರಿಗಳಾಗಿದ್ದರು. ನಂತರ ಭಾರತದ ಉಪ ಪ್ರಧಾನಿಯಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ. ತಮ್ಮ ವೃತ್ತಿ ಜೀವನದುದ್ದಕ್ಕೂ ದೇಶದ ಅಭಿವೃದ್ಧಿಗೆ ಶೋಷಿತರ ಏಳಿಗೆಗಾಗಿ ಶ್ರಮಿಸಿದವರು ಎಂದು ಬಣ್ಣಿಸಿದರು.

ಬಾಬು ಜಗಜೀವನ ರಾಂ ಯಾವುದೇ ಸಮಾಜಕ್ಕೆ ಸೀಮಿತವಲ್ಲ ಅವರು ನಮ್ಮ ದೇಶದ ಆಸ್ತಿ, ಸಾರ್ವಕಾಲಕ್ಕೂ ಸರ್ವರೂ ಪ್ರೀತಿಸುವ ನಾಯಕರ ಸಾಲಿನಲ್ಲಿ ಇವರು ಸಹ ಒಬ್ಬರು ಎಂದು ಹೇಳಿದರು.

ಶಾಸಕ ರವಿಕುಮಾರ್ ಅವರು ಮಾತನಾಡಿ, ಬಾಂಗ್ಲಾ ವಿಮೋಚನೆಯ ಸಂದರ್ಭದಲ್ಲಿ ದೇಶದಲ್ಲಿ ಉದ್ಭವಿಸಿದ ಆಹಾರ ಕೊರತೆಯಿಂದ ಸಾರ್ವಜನಿಕರು ತತ್ತರಿಸುತ್ತಿದ್ದಾಗ ಆಹಾರ ಧಾನ್ಯಗಳನ್ನು ದೇಶದ ಜನತೆಗೆ ನೀಡಿ ಹಸಿವು ನೀಗಿಸಿದ ಮಹಾನ್ ಚೇತನ ರಾಜಕೀಯ ಮುತ್ಸದ್ದಿ ಬಾಬು ಜಗಜೀವನ ರಾಮ್‌ ಎಂದು ಹೇಳಿದರು.

ಬಾಬು ಜಗಜೀವನ್ ರಾಮ್‌ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಚರ್ಚ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿವಿಧ ಶಾಲಾ ಕಾಲೇಜಿನ ಮಕ್ಕಳಿಗೆ ಬಹುಮಾನ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮೈ ಶುಗರ್ ಕಾರ್ಖಾನೆಯ ಅಧ್ಯಕ್ಷ ಸಿ.ಡಿ.ಗಂಗಾಧರ, ಮುಡಾ ಅಧ್ಯಕ್ಷ ನಯೀಮ್, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ, ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮಂಡ್ಯ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಮಂಜು, ಡಾ.ಬಾಬು ಜಗಜೀವನ ರಾಮ್‌ ಸಂಘದ ಜಿಲ್ಲಾಧ್ಯಕ್ಷ ಎನ್‌.ಆರ್. ಚಂದ್ರ ಸೇರಿದಂತೆ ಇನ್ನಿತರ ಮುಖಂಡರುಗಳು ಉಪಸ್ಥಿತರಿದ್ದರು.

Tags:
error: Content is protected !!