Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಬೇಬಿಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ; ಸಿಎಂ ಅಪರ ಕಾರ್ಯದರ್ಶಿ ಸೇರಿ ೧೨ ಅಧಿಕಾರಿಗಳು ಸಾಥ್

ಮಂಡ್ಯ : ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಟ್ರಯಲ್‌ ಬ್ಲಾಸ್ಟ್‌ ಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದರೂ ಕೂಡ ಸಿದ್ಧತೆ ನಡೆಯುತ್ತಿದೆ. ಈ ಮಧ್ಯೆ ಈ ಹಿಂದೆ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಲೋಕಾಯುಕ್ತ ತನಿಖೆಯ ವರದಿ ಬಹಿರಂಗವಾಗಿದ್ದು, ಅಕ್ರಮಕ್ಕೆ ಸಿಎಂ ಅಪರ ಕಾರ್ಯದರ್ಶಿ ಸೇರಿ ೧೨ ಅಧಿಕಾರಿಗಳು ಸಾಥ್‌ ನೀಡಿರುವ ಸ್ಪೋಟಕ ಅಂಶ ಬಯಲಾಗಿದೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟ, ಚಿನಕುರುಳಿ, ಹೊನಗಾನಹಳ್ಳಿ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿದೆ. ಕೆಲವು ಸರ್ಕಾರಿ ಅಧಿಕಾರಿಗಳ ನೆರವಿನಿಂದ ಅಕ್ರಮ ಗಣಿಗಾರಿಕೆ ನಡೆದಿದೆ. ೨೦೦೩-೪ ನೇ ಸಾಲಿನಿಂದ ೨೦೧೭-೧೮ನೇ ಸಾಲಿನವರೆಗೆ ಅಕ್ರಮ ನಡೆದಿದೆ. ಇನ್ನು ಈ ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ಆರ್ಥಿಕ ನಷ್ಟವಾಗಿದೆ ಎಂದು ಅಧೀಕ್ಷಕರಿಗೆ ಲೋಕಾಯುಕ್ತ ಡಿವೈಎಸ್‌ ಪಿ ಸಲ್ಲಿಸಿರುವ ವರದಿಯಿಂದ ಬಹಿರಂಗವಾಗಿದೆ.

ಇನ್ನು ಜೂನ್‌ ೧೫ರಂದು ಸಲ್ಲಿಕೆಯಾಗಿರುವ ವರದಿಯಲ್ಲಿ ಸಿಎಂ ಅಪರ ಕಾರ್ಯದರ್ಶಿ ಎಸ್‌ ಜಿಯಾವುಲ್ಲಾ ಹೆಸರು ಉಲ್ಲೇಖವಾಗಿದೆ. ಮಂಡ್ಯ ಡಿಸಿಯಾಗಿದ್ದ ಜಿಯಾವುಲ್ಲಾ ಪ್ರಸ್ತುತ ಸಿಎಂ ಅಪರ ಕಾರ್ಯದರ್ಶಿಯಾಗಿದ್ದಾರೆ. ೧೨ ಅಧಿಕಾರಿಗಳು ಕರ್ತವ್ಯ ಲೋಪವೆಸಗಿರುವ ಬಗ್ಗೆ ವರದಿಯಲ್ಲಿ ಬಿಡಿ ಬಿಡಿಯಾಗಿ ತಿಳಿಸಲಾಗಿದೆ.

ಇದೀಗ ದೂರುದಾರ ಕೆ.ಆರ್‌ ರವೀಂದ್ರ ಲೋಕಾಯುಕ್ತ ಡಿವೈಎಸ್‌ ಪಿ ವರದಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಪ್ರಕರಣವನ್ನು ಸಿಬಿಐ ಅಥವಾ ಎಸ್‌ ಐಟಿ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿದ್ದಾರೆ.

Tags: