ಮಂಡ್ಯ: ಕೆಆರ್‌ಎಸ್ ಅಣೆಕಟ್ಟು ಭರ್ತಿಯಾಗಿರುವ ಹಿನ್ನೆಲೆ ಇಂದು(ಜು.29) ಸಿಎಂ ಸಿದ್ದರಾಮಯ್ಯ ಕಾವೇರಿ ನದಿಗೆ ಬಾಗಿನ ಅರ್ಪಿಸಿದ್ದಾರೆ.
ಬಾಗಿನ ಅರ್ಪಿಸಲು ಮೈಸೂರಿನಿಂದ ಸಿಎಂ ಸಿದ್ದರಾಮಯ್ಯ ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳ ಜೊತೆ ಒಂದೇ ಬಸ್ಸಿನಲ್ಲಿ ಕೆಆರ್‌ಎಸ್‌ಗೆ ಆಗಮಿಸಿದರು.
ಕೆಆರ್‌ಎಸ್ ಮುಖ್ಯ ದ್ವಾರಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಸಿಎಂ ಹಾಗೂ ಸಚಿವರಿಗೆ ಮಂಡ್ಯ ಜಿಲ್ಲಾಡಳಿತ ಹಾಗೂ ಕಾವೇರಿ ನೀರಾವರಿ ನಿಗಮದ ವತಿಯಿಂದ ಅಭೂತಪೂರ್ವ ಸ್ವಾಗತ ಕೋರಲಾಯಿತು.
ಕೆಆರ್‌ಎಸ್ ಮುಖ್ಯ ದ್ವಾರದಿಂದ ಕಾಲ್ನಡಿಯಲ್ಲೇ ಬಾಗಿನ ಸಲ್ಲಿಸಲು ಆಗಮಿಸಿದ ಸಿಎಂ ಹಾಗೂ ಸಚಿವರುಗಳಿಗೆ ಡೊಳ್ಳು ಕುಣಿತ, ಜಾನಪದ ಕಲಾತಂಡಗಳು ಸ್ವಾಗತ ಕೋರಿದವು.
ಬಳಿಕ ಅರ್ಚಕ ಭಾನುಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ ಕಾವೇರಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಎನ್.ಚಲುವರಾಯಸ್ವಾಮಿ, ಡಾ.ಹೆಚ್.ಸಿ.ಮಹಾದೇವಪ್ಪ, ಕೆ.ವೆಂಕಟೇಶ್, ಶಾಸಕರಾದ ಪಿ.ಎಂ. ನರೇಂದ್ರ ಸ್ವಾಮಿ, ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಹರೀಶ್ ಗೌಡ, ತನ್ವೀರ್ ಸೇಠ್, ಡಿ. ರವಿಶಂಕರ್ ಮತ್ತಿತರರ ಸಾಥ್ ನೀಡಿದರು.
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…