ಮಂಡ್ಯ: ಯುಗಾದಿ ಹಬ್ಬದ ಜೂಜಾಟಕ್ಕೆ ಮಂಡ್ಯ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ಬ್ರೇಕ್ ಹಾಕಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಹಬ್ಬದ ಜೂಜಿಗೆ ಮಂಡ್ಯ ಎಸ್‌ಪಿ ಎಂ. ಮಲ್ಲಿಕಾರ್ಜುನ ಬಾಲದಂಡಿ ನಿರ್ಬಂಧ ಹೇರಿದ್ದಾರೆ.
ಈ ಬಗ್ಗೆ ಮಾತನಾಡಿರುವ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು, ಯುಗಾದಿ ಹಬ್ಬದಂದು ಎಲ್ಲಾ ಮಾದರಿಯ ಜೂಜಾಟಗಳನ್ನು ನಿಷೇಧಿಸಲಾಗಿದ್ದು, ಒಂದು ವೇಳೆ ಪೊಲೀಸರ ಎಚ್ಚರಿಕೆ ಕಡೆಗಣಿಸಿ ಜೂಜಾಟ ಆಡುವುದು ಹಾಗೂ ಜೂಜು ಅಡ್ಡೆ ನಡೆಸುವವರ ಮೇಲೆ ಗೂಂಡಾ ಕಾಯ್ದೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ಯುಗಾದಿ ಹಬ್ಬದಂದು ಎಲ್ಲಿಯಾದರೂ ಜೂಜಾಟ ಆಡುತ್ತಿರುವುದು ಕಂಡು ಬಂದರೆ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.





