ಮಂಡ್ಯ

ರೂ.30ಕೋಟಿ ವೆಚ್ಚದಲ್ಲಿ ಬನಘಟ್ಟ- ಕಿರಂಗೂರು ಎನ್‌ಎಚ್‌ ಕಾಮಗಾರಿ

ಕಾಮಗಾರಿ ಉದ್ಘಾಟಿಸಿದ ಸಚಿವ ಎನ್ ಚಲುವರಾಯಸ್ವಾಮಿ 

‌ಮಂಡ್ಯ: 30 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬನಘಟ್ಟ – ಕಿರಂಗೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ  ಮಂಗಳವಾರ ಚಾಲನೆ ನೀಡಿದರು.

ಪಾಂಡವಪುರದ ಸಹಕಾರ ಸಕ್ಕರೆ ಕಾರ್ಖಾನೆ ಮುಂಭಾಗ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಬನಘಟ್ಟ – ಕಿರಂಗೂರು ರಸ್ತೆಯನ್ನು 30 ಕೋಟಿ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಸರ್ಕಾರ ತಿರ್ಮಾನಿಸಿದೆ. ಬಹಳ ವರ್ಷಗಳಿಂದ ಹದಗೆಟ್ಟಿದ್ದ ಬನಘಟ್ಟ – ಕಿರಂಗೂರು ರಸ್ತೆಯಲ್ಲಿ ಜನ ಸಾಮನ್ಯರು ಇದುವರೆಗೂ ಅನುಭವಿಸುತ್ತಿದ್ದ ಟ್ರಾಫಿಕ್ ಸಮಸ್ಯೆ ಹಾಗೂ ಅಪಘಾತಗಳನ್ನು ತಪ್ಪಿಸುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಆದಷ್ಟು ಬೇಗ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.

ರಾಷ್ಟ್ರೀಯ ಹೆದ್ದಾರಿಯ ವಾಹನ ಸಂಚಾರ ಹೆಚ್ಚಿರುತ್ತದೆ ಹಾಗಾಗಿ ಉತ್ತಮ ರಸ್ತೆ ನಿರ್ಮಾಣ ಮಾಡಿ ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ  ಮಾತನಾಡಿ ಬನಘಟ್ಟದಿಂದ ಕಿರಂಗೂರು ರಸ್ತೆಯಲ್ಲಿನ ಟ್ರಾಫಿಕ್ ಸಮಸ್ಯೆಯನ್ನು ತಪ್ಪಿಸುವ ಸಲುವಾಗಿ ಸರ್ಕಾರವು ಗುಣಮಟ್ಟದ ರಸ್ತೆ ಕಾಮಗಾರಿಗೆ 30 ಕೋಟಿ ರೂ ಅನುಮೋದನೆ ನೀಡಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಬಹಳ ಮುಖ್ಯವಾಗಿದೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

10 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

12 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

13 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

17 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

22 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

22 hours ago