ಮಂಡ್ಯ

ಬ್ಯಾಂಕುಗಳು ರೈತರ ಜತೆ ಸೌಜನ್ಯದಿಂದ ವರ್ತಿಸಬೇಕು : ಎಚ್‌ಡಿಕೆ

ಮಂಡ್ಯ : ರೈತರು ತಾವು ಪಡೆದ ಸಾಲವನ್ನು ಒಮ್ಮೆಲೇ ಪಾವತಿ (ಒನ್ ಟೈಮ್ ಸೆಟಲ್ ಮೆಂಟ್) ಮಾಡುವ ಸಂದರ್ಭದಲ್ಲಿ ಬ್ಯಾಂಕುಗಳು ಸೂಕ್ತ ಮಾರ್ಗದರ್ಶನ ಮಾಡಬೇಕು ಹಾಗೂ ಪುನಾ ಸಾಲ ನೀಡಬೇಕು ಎಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಬ್ಯಾಂಕುಗಳಿಗೆ ಸೂಚಿಸಿದರು.

ನಗರದಲ್ಲಿ ನಡೆದ ಜಿಲ್ಲಾ ಬ್ಯಾಂಕರ್‌ಗಳ ಸಭೆಯಲ್ಲಿ ಆನ್‌ಲೈನ್ ವೇದಿಕೆ ಮೂಲಕ ಭಾಗಿಯಾಗಿ ಮಾತನಾಡಿದ ಸಚಿವರು, ನಾನಾ ಉದ್ದೇಶಗಳಿಗೆ ರೈತರು ಪಡೆಯುವ ಸಾಲಗಳಿಗೆ ಬಡ್ಡಿ ಹೆಚ್ಚು ಎನ್ನುವ ದೂರುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಅವರು ಏಕಕಾಲಕ್ಕೆ ತಮ್ಮ ಸಾಲವನ್ನು ಪಾವತಿ ಮಾಡಲು ಮುಂದಾಗುತ್ತಿದ್ದಾರೆ. ಅಂತಹ ರೈತರಿಗೆ ಬ್ಯಾಂಕುಗಳು ಸಹಕರಿಸಬೇಕು ಎಂದು ಹೇಳಿದರು.

ಕೃಷಿಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅವರ ಸಾಲದ ಬಡ್ಡಿ ಹೆಚ್ಚಾಗಿದೆ ಎಂದು ದಿನವೂ ದೂರುಗಳು ಬರುತ್ತಿವೆ. ಅದಕ್ಕಾಗಿಯೇ ಅವರು ಒಂದೇ ಬಾರಿಗೆ ಹಣ ಪಾವತಿ ಮಾಡಲು ಶ್ರಮಿಸುತ್ತಿದ್ದಾರೆ. ಅಂತಹ ಸಂದರ್ಭದಲ್ಲಿ ಬ್ಯಾಂಕುಗಳು ಸೌಜನ್ಯದಿಂದ ವರ್ತಿಸಬೇಕು. ರೈತರ ವಿಷಯದಲ್ಲಿ ಯಾವುದೇ ಕಾರಣಕ್ಕೂ ಕಠಿಣವಾಗಿ ನಡೆದುಕೊಳ್ಳಬೇಡಿ ಎಂದು ಕೇಂದ್ರ ಸಚಿವರು ಸ್ಪಷ್ಟ ಸೂಚನೆ ಕೊಟ್ಟರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅನೇಕ ಯೋಜನೆಗಳ ಮೂಲಕ ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸ ಆಗುತ್ತಿದೆ. ಅವರ ಸಬಲೀಕರಣಕ್ಕೆ ಕೇಂದ್ರ ಸರಕಾರ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಮೋದಿ ಅವರು ಜಾರಿಗೆ ತಂದಿರುವ ಯೋಜನೆಗಳ ಸೌಲಭ್ಯಗಳನ್ನು ಜಾರಿಗೆ ತಲುಪಿಸುವ ಕೆಲಸವನ್ನು ಬ್ಯಾಂಕುಗಳು ಉತ್ತಮವಾಗಿ ಮಾಡುತ್ತಿವೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಯುವಕರು, ಮಹಿಳೆಯರು, ಕೃಷಿಕರು ಕೇಂದ್ರದ ಯೋಜನೆಗಳ ಸೌಲಭ್ಯ ಪಡೆಯಲು ಬ್ಯಾಂಕುಗಳು ಸೇತುವೆಯಾಗಿವೆ. ಇದು ಮತ್ತಷ್ಟು ವಿಸ್ತೃತವಾಗಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ಜಿಲ್ಲೆಯಲ್ಲಿ ೨೦೨೫-೨೬ರವರೆಗೆ ಶೇ.೭೭.೭೧ರಷ್ಟು ಹಣವನ್ನು ಕೃಷಿ ಕ್ಷೇತ್ರಕ್ಕೆ ಮೀಸಲು, ಸಣ್ಣ ಕೈಗಾರಿಕೆಗಳಿಗೆ ಶೇ. ೧೧ರಷ್ಟು ಮೀಸಲು ಇಡಲಾಗಿದೆ. ಒಟ್ಟು ಜಿಲ್ಲೆಯ ಯೋಜನೆಗೆ ೧೨೪೯೪.೭೪ ಕೋಟಿ ರೂ.ಗಳನ್ನು ಕ್ರೆಡಿಟ್ ಮಾಡಿಕೊಂಡಿದ್ದೇವೆ. ನೀವು ನೀಡಿರುವ ನಿರ್ದೇಶನ ಮತ್ತು ಅಂಶಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ, ತಮಗೆ ಮಾಹಿತಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ತಿಳಿಸಿದರು.

ಇದೇ ವೇಳೆ ವಾರ್ಷಿಕ ಆರ್ಥಿಕ ಕ್ರೆಡೀಡ್ ರಿಪೋರ್ಟ್ ಬಿಡುಗಡೆ ಮಾಡಲಾಯಿತು. ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಜಿಲ್ಲೆಯ ಬ್ಯಾಂಕ್‌ಗಳ ಮುಖ್ಯಸ್ಥರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

39 mins ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

43 mins ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

46 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

50 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

60 mins ago