ಮಂಡ್ಯ

ಮಾನವ ಹಕ್ಕು ಉಲ್ಲಂಘನೆ ಆಗದಂತೆ ಎಚ್ಚರಿಕೆ ವಹಿಸಿ: ಶ್ಯಾಮ್ ಭಟ್

ಮಂಡ್ಯ: ಅಧಿಕಾರಿಗಳು ಸಾರ್ವಜನಿಕರು ತಮ್ಮ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಕಷ್ಟಗಳನ್ನು ಆಲಿಸಿ ಸೌಜನ್ಯದಿಂದ ವರ್ತಿಸಿದರೆ ಮಾನವ ಹಕ್ಕು ಉಲ್ಲಂಘನೆಯ ಪ್ರಕರಣಗಳು ಸಾಕಷ್ಟು ಕಡಿಮೆಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ. ಶ್ಯಾಮ ಭಟ್ ಅವರು ತಿಳಿಸಿದರು.

ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಅಧಿಕಾರಿಗಳಿಗೆ ತಮ್ಮ ಕೆಲಸದಲ್ಲಿ ಒತ್ತಡವಿರುತ್ತದೆ. ಸರ್ಕಾರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮಾನವ ಹಕ್ಕುಗಳ ರಕ್ಷಕರು ಎಂಬುದನ್ನು ಮರೆಯಬಾರದು. ಸರ್ಕಾರ ನೀಡುವ ಸವಲತ್ತುಗಳನ್ನು ಸಾರ್ವಜನಿಕರಿಗೆ ಒದಗಿಸುವುದು ಅಧಿಕಾರಿಗಳ ಕರ್ತವ್ಯ ವಾಗಿದೆ ಎಂದರು.

ಜಿಲ್ಲೆಯಲ್ಲಿ ಹಾಸ್ಟಲ್ ಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ವ್ಯವಸ್ಥೆಗಳು ತೃಪ್ತಿಕರವಾಗಿರುತ್ತದೆ. ಮಿಮ್ಸ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿ ವೈದ್ಯರ ಕೊರತೆ ಕಂಡುಬಂದಿರುತ್ತದೆ. ವೈದ್ಯರ ನೇಮಾಕಾತಿ ರಾಜ್ಯ ಮಟ್ಟದಲ್ಲಿ ನಡೆಯಬೇಕಿದ್ದು, ಆಯೋಗ ಶಿಫಾರಸ್ಸು ಮಾಡಲಿದೆ ಎಂದರು.

ಮಾನವ ಹಕ್ಕುಗಳ ಆಯೋಗದ ಹೆಸರಿನಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಿಕೊಂಡು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಹಣದ ಬೇಡಿಕೆ ಇಡುವ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಇಂತಹ ಪ್ರಕರಣಗಳು ಕಂಡು ಬಂದಲ್ಲಿ ದೂರು ಸಲ್ಲಿಸಿ ಎಂದರು.

ಆಯೋಗದಿಂದ 8777 ಪ್ರಕರಣ ಇತ್ಯರ್ಥ
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಹಿಂದಿನ ಅಧ್ಯಕ್ಷರು ಹಾಗೂ ಸದಸ್ಯರು 2023 ಫೆಬ್ರವರಿಯಲ್ಲಿ ನಿವೃತ್ತರಾದರು ನಂತರ ಚುನಾವಣೆ ಹಿನ್ನಲೆಯಲ್ಲಿ ಅಧ್ಯಕ್ಷರು ಹಾಗೂ ನೇಮಕವಾಗಲು 8 ತಿಂಗಳು ಬೇಕಾಯಿತು ಈ ಅವಧಿಯಲ್ಲಿ ಸಲ್ಲಿಕೆಯಾದ 5400 ಅರ್ಜಿಗಳು ಹಾಗೂ ನೇಮಕಾತಿ ಯಾದ ನಂತರ ಸಲ್ಲಿಕೆಯಾದ 6417 ಪ್ರಕರಣಗಳು ಸೇರಿಕೊಂಡವು. ಆಯೋಗವು ಒಂದು ವರ್ಷದ ಅವಧಿಯಲ್ಲಿ ಸುಮಾರು 8777 ಪ್ರಕರಣಗಳನ್ನು ಇತ್ಯರ್ಥ ಪಡಿಸಿ ಈಗ 3000 ಪ್ರಕರಣಗಳು ಬಾಕಿ ಇದೆ ಎಂದು ಮಾಹಿತಿ ನೀಡಿದರು.

ಕರ್ನಾಟಕ ಮಾನವ ಹಕ್ಕುಗಳ ಆಯೋಗವು ಪ್ರತಿ ಜಿಲ್ಲೆಗೆ ಭೇಟಿ ನೀಡಿ ಸಾರ್ವಜನಿಕರಿಂದ ದೂರು ಸ್ವೀಕರಿಸುತ್ತದೆ. ಇದಲ್ಲದೇ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಿದ್ದಲ್ಲಿ ಸಾರ್ವಜನಿಕರು ನೇರವಾಗಿ‌ ಬೆಂಗಳೂರಿನ ಕಚೇರಿಗೆ ಬಂದು ಸಲ್ಲಿಸಬಹುದು. ಇದಲ್ಲದೇ ಆಯೋಗವು ಸ್ವಯಂ ಪ್ರೇರಿತವಾಗಿ ಪತ್ರಿಕೆಗಳ ವರದಿಯ ಮೇಲೆ ದೂರು ದಾಖಲಿಸಲಿದೆ ಎಂದರು.

ಹಾಸ್ಟಲ್ ಗಳಲ್ಲಿ ಡ್ರೆಸಿಂಗ್ ರೂಂ ವ್ಯವಸ್ಥೆ ಮಾಡಿ

ಜಿಲ್ಲೆಯಲ್ಲಿ ಮುಂದಿನ‌ ದಿನಗಳಲ್ಲಿ ‌ನಿರ್ಮಾಣವಾಗುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೆಣ್ಷು ಮಕ್ಕಳಿಗೆ ಅನುಕೂಲವಾಗುವಂತೆ ಪ್ರತ್ಯೇಕವಾಗಿ ಡ್ರೆಸಿಂಗ್ ರೂಂ ವ್ಯವಸ್ಥೆ ಮಾಡಿ.ಏಕೆಂದರೆ ಒಂದೇ ಕೊಠಡಿಯಲ್ಲಿ 4 ರಿಂದ 5 ಹೆಣ್ಣು ಮಕ್ಕಳು ವಾಸಿಸುತ್ತಾರೆ. ಹೀಗಾಗಿ ಡ್ರೆಸಿಂಗ್‌ ರೂಂ ಅನುಕೂಲವಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಎಸ್.ಕೆ ವಂಟಿಗೋಡಿ ಅವರು ತಿಳಿಸಿದರು.

ಆಯೋಗಕ್ಕೆ ಸಲ್ಲಿಕೆಯಾಗುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಪತ್ರ ಬರೆದು ಕೇಳುವ ದಾಖಲೆಗಳನ್ನು ಶೀಘ್ರವಾಗಿ ಕಳುಹಿಸಿಕೊಡಿ. ಇದರಿಂದ ಪ್ರಕರಣಗಳನ್ನು ಬೇಗ ಇತ್ಯರ್ಥಪಡಿಸಬಹುದು ಎಂದರು.

ಮಂಡ್ಯ ಜಿಲ್ಲೆಗೆ ಸಂಬಂಧಿಸಿದಂತೆ ದಾಖಲಾಗಿದ್ದ 20 ಪ್ರಕರಣಗಳ ವಿಚಾರಣೆ ನಡೆಸಲಾಯಿತು. ಸಭೆ ಮುಗಿದ ನಂತರ ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಆಯೋಗ ಸ್ವೀಕರಿಸಿತು.

ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಾತನಾಡಿ ಮಾನವ ಹಕ್ಕುಗಳ ಆಯೋಗದ ಜೊತೆ ಸರ್ಕಾರಿ ಅಧಿಕಾರಿಗಳೆಲ್ಲರೂ ಕೈ ಜೋಡಿಸಿ,ಮಾನವ ಹಕ್ಕುಗಳ ಸಂರಕ್ಷಣೆ ಮಾಡಬೇಕು. ಮಾನವೀಯತೆ ಹಾಗೂ ಹೃದಯವಂತಿಕೆ ಮನೋಭಾವದಿಂದ ಕೆಲಸ ನಿರ್ವಹಿಸಿದರೆ ಮಾನವ ಹಕ್ಕುಗಳ ಉಲ್ಲಂಘನೆಯಾಗುವುದಿಲ್ಲ ಎಂದರು

ಅಧಿಕಾರಿಗಳೆಲ್ಲರೂ ಮಾನವ ಆಯೋಗದ ಮಾರ್ಗದರ್ಶನ ಪಾಲಿಸಬೇಕು, ಆಯೋಗದಿಂದ ಬಂದ ಪ್ರಕರಣಕ್ಕೆ ಸರಿಯಾದ ರೀತಿಯಲ್ಲಿ ದೂರು ವಿಶ್ಲೇಷಣೆ ಮಾಡಿ ಕಾಲಮಿತಿಯೊಳಗೆ ಆಯೋಗಕ್ಕೆ ವರದಿ ಸಲ್ಲಿಸಿ ಎಂದು ತಿಳಿಸಿದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಅರುಣ್ ಪೂಜಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ನಂದಿನಿ, ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

8 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

8 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

9 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

9 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

10 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

11 hours ago